ಬೀಜಿಂಗ್ (ಚೀನಾ) – ದಕ್ಷಿಣ ಏಷ್ಯಾದಲ್ಲಿ, ವಿಶೇಷವಾಗಿ ಕಾಶ್ಮೀರದಲ್ಲಿ ಬಾಕಿ ಉಳಿದಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಯಾವುದೇ ಏಕಪಕ್ಷೀಯ ಕ್ರಮವನ್ನು ವಿರೋಧಿಸುವುದಾಗಿ ಚೀನಾ ಮತ್ತು ಪಾಕಿಸ್ತಾನ ಜಂಟಿಯಾಗಿ ಹೇಳಿಕೆ ನೀಡಿವೆ. ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ 5 ದಿನಗಳ ಚೀನಾ ಪ್ರವಾಸದಲ್ಲಿದ್ದು ಅಲ್ಲಿ ನಡೆದ ಚರ್ಚೆಯ ಬಳಿಕ ಈ ಹೇಳಿಕೆ ನೀಡಲಾಗಿದೆ.
1. ಚೀನಾದ ಕಡೆಯಿಂದ ಜಮ್ಮು-ಕಾಶ್ಮೀರ ವಿವಾದವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ನ್ಯಾಯಯುತ ಮತ್ತು ಶಾಂತಿಯುತ ರೀತಿಯಲ್ಲಿ ಪರಿಹರಿಸಬೇಕು ಎಂದು ಪುನರುಚ್ಚರಿಸಲಾಗಿದೆ. ಈ ಮನವಿಯಲ್ಲಿ ಎರಡೂ ದೇಶಗಳ ಮುಖ್ಯಸ್ಥರು ಚೀನಾ-ಪಾಕಿಸ್ತಾನ ಆರ್ಥಿಕ ಹೆದ್ದಾರಿಯನ್ನು ಮತ್ತು ಅದರ ವಿರೋಧಿಗಳಿಂದ ರಕ್ಷಿಸಲು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
2. ಚೀನಾ-ಪಾಕಿಸ್ತಾನ ಆರ್ಥಿಕ ಹೆದ್ದಾರಿಯು ಪಾಕಿಸ್ತಾನದ ಬಲೂಚಿಸ್ತಾನ್‌ನಲ್ಲಿರುವ ಗ್ವಾದರ್ ಬಂದರನ್ನು ಚೀನಾದ ಕ್ಸಿನ್‌ಜಿಯಾಂಗ್ ಪ್ರಾಂತ್ಯದೊಂದಿಗೆ ಜೋಡಿಸುತ್ತದೆ. ಪಾಕ್ ಆಕ್ರಮಿತ ಕಾಶ್ಮೀರದ ಮೂಲಕ ಈ ಹೆದ್ದಾರಿ ನಿರ್ಮಾಣ ಆಗುತ್ತಿರುವುದರಿಂದ ಭಾರತ ಇದನ್ನು ವಿರೋಧಿಸುತ್ತಿದೆ.
ಸಂಪಾದಕೀಯ ನಿಲುವು
|