
ಜಿಲಿನ್ (ಚೀನಾ) – ಜೂನ್ 10 ರಂದು, ಚೀನಾದ ಜಿಲಿನ್ ನಗರದಲ್ಲಿ 4 ಅಮೇರಿಕನ್ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಯಿತು. ಇದರಲ್ಲಿ ಇವರೆಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ಒಬ್ಬ ಶಿಕ್ಷಕಿಯೂ ಸೇರಿದ್ದಾರೆ. ಅಮೇರಿಕಾದ ಅಯೋವಾ ರಾಜ್ಯದ ಕಾರ್ನೆಲ್ ಮಹಾವಿದ್ಯಾಲಯದ ಈ ಎಲ್ಲಾ ಶಿಕ್ಷಕರು ಒಂದು ಸಾರ್ವಜನಿಕ ಉದ್ಯಾನವನದಲ್ಲಿ ಉಪಸ್ಥಿತರಿದ್ದರು. ಆ ಸಂದರ್ಭದಲ್ಲಿ ಅವರ ಮೇಲೆ ಹಲ್ಲೆ ಮಾಡಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದೆ. ಈ ದಾಳಿಯನ್ನು ಯಾರು ಮತ್ತು ಏಕೆ ಮಾಡಿದ್ದಾರೆ, ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ‘ನಾವು ಎಲ್ಲಾ ಶಿಕ್ಷಕರೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಮಹಾವಿದ್ಯಾಲಯದ ಆಡಳಿತ ಮಂಡಳಿ ತಿಳಿಸಿದೆ ಹಾಗೂ ಅವರಿಗೆ ಅಗತ್ಯ ಸಹಾಯ ನೀಡಲಾಗುತ್ತಿದೆ ಎಂದಿದೆ.
ಈ ಹಿಂದೆಯೂ ಚೀನಾದಲ್ಲಿ ಸಾರ್ವಜನಿಕ ಸ್ಥಳಗಳಾದ ಶಾಲೆ, ಆಸ್ಪತ್ರೆ ಮತ್ತು ಉದ್ಯಾನವನಗಳಲ್ಲಿ ಅನೇಕ ಬಾರಿ ಚಾಕುವಿನಿಂದ ದಾಳಿ ನಡೆಸಿದ ಘಟನೆಗಳು ಘಟಿಸಿವೆ.
China : Four US teachers brutally stabbed in Jilin City; ‘Major suspect’ arrested
The teachers were on a teaching exchange program pic.twitter.com/4XAN2LglvC
— Sanatan Prabhat (@SanatanPrabhat) June 11, 2024
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಚೀನಾದ ಸೇನೆಯೊಂದಿಗೆ ಪ್ರತಿ ವರ್ಷ ೧ ಸಾವಿರದ, ೧೦೦ ಬಾರಿ ಮುಖಾಮುಖಿ ಮಾತುಕತೆ!
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara