Terror Threat to Ayodhya Ram Mandir: ಜಿಹಾದಿ ಭಯೋತ್ಪಾದಕರು ಶ್ರೀರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆಯ ನಂತರ ಅಯೋಧ್ಯೆಯ ಭದ್ರತೆಯಲ್ಲಿ ಹೆಚ್ಚಳ! 

ಅಯೋಧ್ಯೆ – ಶ್ರೀರಾಮ ಮಂದಿರವನ್ನು ಸ್ಫೋಟಿಸುವುದಾಗಿ ಭಯೋತ್ಪಾದಕ ಸಂಘಟನೆ ‘ಜೈಶ್-ಎ-ಮೊಹಮ್ಮದ್’ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜಕರನ್ ನಯ್ಯರ್ ಅವರು ಜೂನ್ 14 ರಂದು ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಅಯೋಧ್ಯಾ ಧಾಮದ ಭದ್ರತೆ ಈಗಾಗಲೇ ಬಿಗಿಯಾಗಿದೆ. ಈಗ ಅದನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಹಿರಿಯ ಗೆಜೆಟೆಡ್ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿವಿಧ ಪ್ರದೇಶಗಳಲ್ಲಿ ತಂಡಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೇ ವಿವಿಧ ಇಲಾಖೆಗಳಲ್ಲಿ ವಿಶೇಷ ಸಶಸ್ತ್ರ ಪೊಲೀಸ್ ಪಡೆಯ ಯೋಧರನ್ನು ನಿಯೋಜಿಸಲಾಗಿದೆ. ಪ್ರಮುಖ ಸ್ಥಳಗಳ ಭದ್ರತೆಯ ಮೇಲೆ ದಿನದ 24 ಗಂಟೆಯೂ ನಿಗಾ ಇಡಲಾಗಿದೆ. ಶ್ರೀರಾಮ ಜನ್ಮಭೂಮಿ ಕಾಂಪ್ಲೆಕ್ಸ್‌ನಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಜಾಗರೂಕತೆಯಿಂದ ಇರಲು ಹೇಳಲಾಗಿದೆ.

ಸಂಪಾದಕೀಯ ನಿಲುವು

ಅಂತಹ ಬೆದರಿಕೆ ಹಾಕಲು ಯಾರೂ ಧೈರ್ಯ ಮಾಡಬಾರದು ಎಂಬ ನಡುಕವು ಸರ್ಕಾರ ನಿರ್ಮಾಣ ಮಾಡಬೇಕು !