Yoga Event in Dal Lake Srinagar: ಶ್ರೀನಗರದ ದಾಲ್ ಸರೋವರದಲ್ಲಿ ನಡೆಯಲಿರುವ ಯೋಗ ದಿನದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ! 

ನವದೆಹಲಿ – ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತದೆ. ಈ ನಿಮಿತ್ತ, ಪ್ರಪಂಚದಾದ್ಯಂತ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ಮುಂದಾಳತ್ವದಿಂದಲೇ ಈ ಯೋಗ ದಿನವನ್ನು ಘೋಷಿಸಲಾಯಿತು. ಪ್ರಧಾನಿ ಮೋದಿ ಈ ವರ್ಷ ಜೂನ್ 21 ರಂದು ಶ್ರೀನಗರದ ದಾಲ್ ಸರೋವರದ ದಡದಲ್ಲಿ ಯೋಗ ದಿನವನ್ನು ಆಚರಿಸಲಿದ್ದಾರೆ. ಈ ಕುರಿತು ಅಧಿಕೃತ ಘೋಷಣೆ ಇನ್ನೂ ಹೊರಬಿದ್ದಿಲ್ಲವಾದರೂ, ಮೂಲಗಳು ನೀಡಿರುವ ಮಾಹಿತಿಯಂತೆ ದಾಲ್ ಸರೋವರದ ಸ್ಥಳದಲ್ಲಿ ಕಾರ್ಯಕ್ರಮದ ಸಿದ್ಧತೆ ಆರಂಭಿಸಲಾಗಿದೆ.