Muslims Fight With Each Other: ಬಕ್ರೀದ್ ಹಬ್ಬದ ನಿಮಿತ್ತ ಕರೆದಿದ್ದ ಶಾಂತಿ ಸಭೆಯಲ್ಲಿ ಮುಸ್ಲಿಮರ ಎರಡು ಗುಂಪುಗಳ ನಡುವೆ ಹೊಡೆದಾಟ !

ಸೌಜನ್ಯ: Asianet Suvarna

ಕೊಪ್ಪಳ- ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಪೊಲೀಸರು ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಶಾಂತಿಸಭೆ ಕರೆದಿದ್ದರು. ಈ ಸಭೆಯಲ್ಲಿ ಹಾಲಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರ ಆಪ್ತ ಮಿತ್ರ ಅಲಿ ಖಾನ್ ಮಾತನಾಡಲು ಮುಂದಾದಾಗ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಬೆಂಬಲಿಗರು ಆಕ್ಷೇಪಿಸಿದರು. ಇದರಿಂದ ಹಾಲಿ-ಮಾಜಿ ಶಾಸಕರ  ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ಸಂದರ್ಭದಲ್ಲಿ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಜನಾರ್ಧನ ರೆಡ್ಡಿ ಮತ್ತು ಇಕ್ಬಾಲ್ ಅನ್ಸಾರಿ ಕಳೆದ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯ ವೇಳೆ ಪರಸ್ಪರರ ಮೇಲೆ ತೀರ್ವ ವಾಗ್ದಾಳಿ ನಡೆಸಿದ್ದರು. ಉಭಯ ನಾಯಕರ ಬೆಂಬಲಿಗರ ನಡುವೆ ವೈಮನಸ್ಸು ಇತ್ತು ಎಂದು ಹೇಳಲಾಗಿದೆ.