ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರೌಢಶಾಲೆಯಲ್ಲಿ ವೃಕ್ಷಾರೋಹಣ

ಗದಗ: ನಗರದ ಮಸಾರಿ ವಿದ್ಯಾನಗರದಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರೌಢ ಶಾಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಆಗಮಿಸಿ ಶಾಲೆಯ ಆವರಣದಲ್ಲಿ ವೃಕ್ಷಾರೋಹಣ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿದ್ಯಾರ್ಥಿಗಳಿಗೆ ಇದರ ಮಹತ್ವ ಬಿಂಬಿಸಲಾಯಿತು ಮತ್ತು ಸಮಿತಿಯು ಮಾಡುತ್ತಿರುವ ಸಾಮಾಜಿಕ ಕಾರ್ಯ ಮತ್ತು ಜಾಗೃತಿ ಕಾರ್ಯಕ್ರಮಗಳ ಬಗ್ಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಕಾರ್ಯಕರ್ತರು ಮತ್ತು ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವೈಶಿಷ್ಟ್ಯಪೂರ್ಣ ಘಟನೆ:

ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗಿದ್ದರು.

ಶಿಕ್ಷಕರು ವಿದ್ಯಾರ್ಥಿಗಳಿಗೆ ಇನ್ನುಮುಂದೆ ಈ ಎಲ್ಲ ಗಿಡಗಳ ಜವಾಬ್ದಾರಿ ನಿಮ್ಮದು, ನೀರು ಹಾಕುವುದು ಅದರ ಬಗ್ಗೆ ಕಾಳಜಿ ನಿಮ್ಮದೇ ಅಂತ ಜವಾಬ್ದಾರಿ ಕೊಟ್ಟರು, ಅದಕ್ಕೆ ವಿದ್ಯಾರ್ಥಿಗಳು ಸಮ್ಮಿತಿಸಿದರು.