ನವ ದೆಹಲಿ – ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರು 2 ದಿನಗಳ ಭಾರತ ಪ್ರವಾಸದಲ್ಲಿದ್ದಾರೆ. ಹಸೀನಾ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಸಂಬಂಧಗಳ ಕುರಿತು ಚರ್ಚಿಸಿದರು. ಅದಕ್ಕೂ ಮುನ್ನ ಅವರು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರನ್ನು ಭೇಟಿಯಾದರು. ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಕುರಿತು ಇಬ್ಬರೂ ಆಳವಾದ ಚರ್ಚೆ ನಡೆಸಿದರು. ಹಸೀನಾ ಅವರು ಜೂನ್ 9 ರಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಸಂಪಾದಕೀಯ ನಿಲುವುಭಾರತವು ಬಾಂಗ್ಲಾದೇಶದೊಂದಿಗೆ ಉತ್ತಮ ಸಂಬಂಧ ಹೊಂದಿರುವುದು ಕಾಣುತ್ತಿದೆ. ಅದರಲ್ಲೂ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಉತ್ತಮ ಸಂಬಂಧ ಇದೆ; ಆದರೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಸ್ಥಿತಿ ಶೋಚನೀಯವಾಗಿದೆ. ಹಸೀನಾ ಅವರ ಪಕ್ಷದ ಅಧಿಕಾರಿಗಳು ಹಿಂದೂಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ‘ಹಿಂದೂಗಳ ರಕ್ಷಣೆಗಾಗಿ ಭಾರತ ಸರ್ಕಾರ ಹಸೀನಾ ಅವರ ಮೇಲೆ ಏಕೆ ಒತ್ತಡ ಹೇರುತ್ತಿಲ್ಲ?,’ ಹೀಗೆ ಪ್ರಶ್ನೆ ಉದ್ಭವಿಸುತ್ತದೆ ! |