PIL Dismissed by Karnataka HC: ಕರ್ನಾಟಕ ಉಚ್ಚನ್ಯಾಯಾಲಯದಿಂದ ಬಿಜೆಪಿ ನಾಯಕರ ವಿರುದ್ಧದ ದ್ವೇಷ ಭಾಷಣಗಳ ಅರ್ಜಿ ವಜಾ !

ಮುಹಮ್ಮದ್ ಖಲೀಉಲ್ಲಾ ಸಲ್ಲಿಸಿರುವ ಅರ್ಜಿಯಲ್ಲಿ ಸೂತ್ರಗಳಲ್ಲಿ ಸತ್ಯಾಂಶವಿಲ್ಲ ಎಂದು ನ್ಯಾಯಾಲಯದಿಂದ ಛೀಮಾರಿ !

ಬೆಂಗಳೂರು – ರಾಜ್ಯದ ಬಿಜೆಪಿ ನಾಯಕರ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಉಚ್ಚನ್ಯಾಯಾಲಯವು ವಜಾಗೊಳಿಸಿದೆ. ಈ ನಾಯಕರು ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಶಾಸಕ ರೇಣುಕಾಚಾರ್ಯ, ಸಿ.ಟಿ. ರವಿ, ತೇಜಸ್ವಿ ಸೂರ್ಯ, ಪ್ರತಾಪ್ ಸಿಂಹ ಸೇರಿದಂತೆ ರಾಜ್ಯದ ಅನೇಕ ಹಿರಿಯ ನಾಯಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ಆಗ್ರಹಿಸಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಲಯವು ಅರ್ಜಿದಾರ ಮುಹಮ್ಮದ್ ಖಲಿಉಲ್ಲಾಗೆ ತೀವ್ರ ತರಾಟೆಗೆ ತೆಗೆದುಕೊಂಡಿತು. ಮುಖ್ಯ ನ್ಯಾಯಾಧೀಶ ಎನ್.ವಿ. ಅಂಜರಿಯಾ ನೇತೃತ್ವದ ವಿಭಾಗೀಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸುವಾಗ, ಈ ಆರೋಪಗಳು ತುಂಬಾ ಸಾಮಾನ್ಯವಾಗಿದ್ದು ಅದರಲ್ಲಿ ಯಾವುದೇ ಸತ್ಯಾಂಶವಿಲ್ಲ, ಈ ಅರ್ಜಿ ರಾಜಕೀಯದಿಂದ ಕೂಡಿದೆ ಎಂದು ಹೇಳಿದೆ.

ಮುಖ್ಯ ನ್ಯಾಯಮೂರ್ತಿ, ನೀವು (ಅರ್ಜಿದಾರರು) ಇಂತಹ ಅರ್ಜಿಯನ್ನು ದಾಖಲಿಸುವ ಮೂಲಕ ಹೈಕೋರ್ಟ್‌ನ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದೀರಿ ಎಂದು ಹೇಳಿದರು. ನ್ಯಾಯಾಲಯದ ಸಮಯವನ್ನು ಏಕೆ ಹಾಳು ಮಾಡುತ್ತಿದ್ದೀರಿ? ಇದನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಸ್ವೀಕರಿಸಲಾಗುವುದಿಲ್ಲ ಎಂದಿದ್ದಾರೆ.

ಸಂಪಾದಕೀಯ ನಿಲುವು

ಬಿಜೆಪಿ ನೇತೃತ್ವದ ಸರ್ಕಾರವು ಮುಸಲ್ಮಾನರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿದ್ದರೂ ಸಹ, ಮುಸಲ್ಮಾನರು ಜನತಾ ಸರ್ಕಾರದ ವಿರುದ್ಧ ಯಾವ ರೀತಿ ಕೆಲಸ ಮಾಡುತ್ತಿದ್ದಾರೆ ? ಎಂಬುದನ್ನು ತೋರಿಸಲು ಮತ್ತೊಂದು ಉದಾಹರಣೆ! ಇದರಿಂದ ಬಿಜೆಪಿ ಏನಾದರೂ ಪಾಠ ಕಲಿಯುವುದೇ?