ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಭೂ ಹಗರಣದ ಗಂಭೀರ ಆರೋಪ !

ನಷ್ಟ ಪರಿಹಾರಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿದ ಆರೋಪ !

ನವದೆಹಲಿ – ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ’ದಿಂದ (‘ಮುಡಾ’) ನಷ್ಟಪರಿಹಾರಕ್ಕಾಗಿ ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತೆ ಸ್ನೇಹಮೊಯ್ ಕೃಷ್ಣ ಅವರು ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜ್ ಸೇರಿ 6 ಮಂದಿ ಸೇರಿ ಒಟ್ಟು 9 ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ಜಿಲ್ಲಾಧಿಕಾರಿ, ತಹಸೀಲ್ದಾರ್, ಉಪ ನೋಂದಣಾಧಿಕಾರಿ ಹಾಗೂ ‘ಮುಡಾ’ ಅಧಿಕಾರಿಗಳ ಕೈವಾಡವೂ ಇದೆ ಎಂದು ಆರೋಪಿಸಲಾಗಿದೆ. ಇದಲ್ಲದೇ ಸ್ನೇಹಮೋಯ್ ಕೃಷ್ಣ ಅವರು ರಾಜ್ಯಪಾಲರು, ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೂ ಪತ್ರ ಬರೆದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಏನಿದು ಪ್ರಕರಣ ?

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಅವರ ಸಂಬಂಧಿಕರು ‘ಮುಡಾ’ ಅಧಿಕಾರಿಗಳೊಂದಿಗೆ ಶಾಮೀಲಾಗಿ ‘50:50 ಭೂ ವಿತರಣಾ ಯೋಜನೆ’ ಅಡಿಯಲ್ಲಿ ದುಬಾರಿ ಭೂಮಿ ಪಡೆಯಲು ನಕಲಿ ದಾಖಲೆಗಳನ್ನು ಸಿದ್ಧಪಡಿಸಿದ್ದರು. ಈ ವಿಚಾರದಲ್ಲಿ ಬಿಜೆಪಿ ಕೂಡ ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ವಿರೋಧಿಸಲು ಆರಂಭಿಸಿದೆ.

’50:50 ಭೂ ವಿತರಣಾ ಯೋಜನೆ’ ಮೂಲಕ ದುರ್ಬಳಕೆ !

2021ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ‘ಮುಡಾ’ ಯೋಜನೆಯ ಫಲಾನುಭವಿಯಾಗಿದ್ದರು. ಈ ಯೋಜನೆಯಡಿ ‘ಮುಡಾ’ ಯಾವುದೇ ಭೂಮಿಯಲ್ಲಿ ವಸತಿ ಸಂಕೀರ್ಣಗಳನ್ನು ಅಭಿವೃದ್ಧಿಪಡಿಸಲು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಯಿತು. ‘ಅಭಿವೃದ್ಧಿ ಹೊಂದಿದ ಪ್ರದೇಶದಲ್ಲಿ ಶೇ.50ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಬದಲು ಮೂಲ ಮಾಲೀಕರಿಗೆ ನೀಡಲಾಗುವುದು’ ಎಂಬುದು ನಿಯಮವಾಗಿತ್ತು. ಇದರಡಿ ಭೂ ಮಂಜೂರಾತಿ ಹಗರಣವನ್ನು ಆರ್ ಟಿಐ ಕಾರ್ಯಕರ್ತರೊಬ್ಬರು ಬಯಲಿಗೆಳೆದಿದ್ದಾರೆ. ಕಳೆದ 4 ವರ್ಷಗಳಲ್ಲಿ 50:50 ಯೋಜನೆಯಡಿ 6 ಲಕ್ಷಕ್ಕೂ ಹೆಚ್ಚು ಜಮೀನು ಮಂಜೂರಾಗಿದೆ. ಇದರನ್ವಯ ‘ಮುಡಾ’ ಭೂಸ್ವಾಧೀನಪಡಿಸಿಕೊಂಡ ಭೂ ಮಾಲೀಕರಿಗೆ ಪರಿಹಾರವಾಗಿ ಹೆಚ್ಚಿನ ಬೆಲೆಗೆ ಪರ್ಯಾಯ ನಿವೇಶನಗಳನ್ನು ನೀಡಲಾಯಿತು.