ಬಿಜೆಪಿ ಮತ್ತು ಜನತಾದಳ (ಜಾತ್ಯತೀತ)ದಿಂದ ವಿರೋಧ
ಬೆಂಗಳೂರು – ರಾಮನಗರ ಜಿಲ್ಲೆಯ ಮರುನಾಮಕರಣ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸುತ್ತಿದೆ. ರಾಮನಗರ ಜಿಲ್ಲೆಯ ಹೆಸರಿನಲ್ಲಿ ‘ರಾಮ’ ಇರುವುದರಿಂದ ಜಿಲ್ಲೆಯ ಹೆಸರನ್ನು ‘ಬೆಂಗಳೂರು ದಕ್ಷಿಣ’ ಎಂದು ಬದಲಾಯಿಸಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ. ಇದನ್ನು ನಾವು ಎಂದಿಗೂ ಒಪ್ಪುವುದಿಲ್ಲ,’ ಎಂದು ಬಿಜೆಪಿ ಹೇಳಿದೆ.
1. ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ಹೆಸರು ಬದಲಾಯಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದಾರೆ. ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವಂತೆ ಶಿವಕುಮಾರ್ ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಒತ್ತಾಯಿಸಿದ್ದಾರೆ. ಶಿವಕುಮಾರ್ ಹಾಗೂ ಕೆಲವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
2. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಶಿವಕುಮಾರ್, ಬೆಂಗಳೂರು ನಗರಕ್ಕೆ ಜಾಗತಿಕ ಖ್ಯಾತಿಯನ್ನು ತಂದುಕೊಟ್ಟು ನಗರದ ಸಮೀಪವಿರುವ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲೂಕುಗಳು ಹೆಸರು ಬದಲಾವಣೆಗೆ ಆಗ್ರಹದ ಉದ್ದೇಶವಾಗಿದೆ.
3. ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸಿ.ಎನ್. ಅಶ್ವಥ್ ನಾರಾಯಣ್ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರು ಬದಲಾವಣೆಗೆ ಮುಂದಾಗಿದ್ದರೂ ರಾಮನಗರ ಜಿಲ್ಲೆಯ ಅಭಿವೃದ್ಧಿ ಮಾಡಲೇ ಇಲ್ಲ. ಮೆಡಿಕಲ್ ಕಾಲೇಜನ್ನೂ ಅಲ್ಲಿಂದ ಸ್ಥಳಾಂತರಿಸಿದ್ದಾರೆ ಎಂದು ಹೇಳಿದ್ದಾರೆ.
4. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ‘ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾದ ನಂತರ ಮತ್ತೊಮ್ಮೆ ಈ ಜಿಲ್ಲೆಗೆ ‘ರಾಮನಗರ’ ಎಂದು ಮರುನಾಮಕರಣ ಮಾಡುತ್ತೇವೆ ಎಂದು ಹೇಳಿದರು.
ಸಂಪಾದಕೀಯ ನಿಲುವುಕಾಂಗ್ರೆಸ್ ಎಂದಾದರೂ ಟಿಪ್ಪು ಸುಲ್ತಾನ್, ಔರಂಗಜೇಬ್, ಹುಮಾಯೂನ್, ಅಕ್ಬರ್ ಮುಂತಾದವರ ಹೆಸರುಗಳಿರುವ ರಸ್ತೆಗಳು, ತಾಲ್ಲೂಕುಗಳು ಮತ್ತು ಹಳ್ಳಿಗಳಿಗೆ ಹಿಂದೂ ಹೆಸರುಗಳಾಗಿ ಬದಲಾಯಿಸಿದೆಯೇ? |