|

ರಾಂಚಿ (ಜಾರ್ಖಂಡ್) – ರಾಜ್ಯದ ಪಾಕುರ್‌ನಲ್ಲಿ ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಮಾಧ್ಯಮಗಳ ಪ್ರಕಾರ, ಕೆಲವು ದಿನಗಳ ಹಿಂದೆ ಪಾಕುರ್‌ನಲ್ಲಿ ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯ ಅಶ್ಲೀಲ ವೀಡಿಯೊವನ್ನು ವೈರಲ್ ಮಾಡಲು ಪ್ರಯತ್ನಿಸಿದನು. ನಂತರ ಹಿಂದೂಗಳು ಘಟನೆಯನ್ನು ಪ್ರತಿಭಟಿಸಿ ಬಾಲಕನಿಗೆ ಥಳಿಸಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಮುಸ್ಲಿಮರು ಹಿಂದೂಗಳ ಮನೆಗಳಿಗೆ ಇಟ್ಟಿಗೆ ಮತ್ತು ಕಲ್ಲುಗಳಿಂದ ದೊಡ್ಡ ಪ್ರಮಾಣದಲ್ಲಿ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ಹಲವು ಹಿಂದೂಗಳು ಗಂಭೀರವಾಗಿ ಗಾಯಗೊಂಡಿದ್ದು, ಹಲವು ಮನೆಗಳಿಗೆ ಹಾನಿಯಾಗಿದೆ. ಈ ವೇಳೆ ಪೊಲೀಸರ ಮೇಲೂ ಹಲ್ಲೆ ನಡೆದಿದೆ. ಇದರಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲ ಘಟನೆಗಳಿಂದ ಹಿಂದೂಗಳು ಸ್ಥಳವನ್ನು ಬಿಟ್ಟು ಓಡಿಹೋಗುವ ಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ದಾವೆ ಮಾಡಿದೆ. ಪಾಕೂರು ಗ್ರಾಮ ನಿರ್ಜನವಾಗುತ್ತಿದೆ. ಈ ಪರಿಸ್ಥಿತಿಗೆ ಬಿಜೆಪಿ ನಾಯಕರು ಬಂಗಾಳದಲ್ಲಿರುವ ಬಾಂಗ್ಲಾದೇಶಿ ನುಸುಳುಕೋರರನ್ನು ಹೊಣೆಗಾರರನ್ನಾಗಿ ಮಾಡಿದ್ದಾರೆ. ಈ ವಿಚಾರದಲ್ಲಿ ಹೇಮಂತ್ ಸೊರೇನ್ ಸರಕಾರ ಮೌನ ವಹಿಸಿರುವ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.
ಸಂಪಾದಕೀಯ ನಿಲುವುಕಾಶ್ಮೀರ, ಬಂಗಾಳ ಮತ್ತು ಕೇರಳದ ನಂತರ ಈಗ ಜಾರ್ಖಂಡ್ ಕೂಡ ಹಿಂದೂಗಳ ಕೈತಪ್ಪುವ ಹಾದಿಯಲ್ಲಿದೆ. ಇದನ್ನು ಸಕಾಲದಲ್ಲಿ ನಿಲ್ಲಿಸದಿದ್ದರೆ, ಭಾರತವನ್ನು ಇಸ್ಲಾಮಿಸ್ತಾನ ಮಾಡುವ 2047 ರ ಗುರಿಯನ್ನು ಸಾಧಿಸಲು ಮತಾಂಧರಿಗೆ ಶಕ್ತಿ ಸಿಗುವುದು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath