ಸಂಸತ್ತಿನ ಮುಂಗಾರು ಅಧಿವೇಶನ ಆರಂಭ!

ನವದೆಹಲಿ – ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದೆ. ಆಗಸ್ಟ್ 12 ರವರೆಗೆ ಅಂದರೆ, ಸುಮಾರು ಮೂರು ವಾರಗಳ ಕಾಲ ಈ ಅಧಿವೇಶನ ನಡೆಯಲಿದೆ. ಕೇಂದ್ರೀಯ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23 ರಂದು ಕೇಂದ್ರ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಈ ಅಧಿವೇಶನದಲ್ಲಿ ರೈಲ್ವೇ ಭದ್ರತೆ ಸೇರಿದಂತೆ ನಾನಾ ವಿಷಯಗಳಲ್ಲಿ ವಿಪಕ್ಷಗಳು ಆಕ್ರಮಣಕಾರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. 90 ವರ್ಷಗಳಷ್ಟು ಹಳೆಯದಾದ ವಿಮಾನಯಾನ ಕಾಯ್ದೆಗೆ ತಿದ್ದುಪಡಿ ತರುವ ಮಸೂದೆ ಸೇರಿದಂತೆ ಆರು ಇತರ ಮಸೂದೆಗಳನ್ನು ಅಧಿವೇಶನದಲ್ಲಿ ಮಂಡಿಸಲಾಗುವುದು. ಇದರೊಂದಿಗೆ ಜಮ್ಮು-ಕಾಶ್ಮೀರದ ಬಜೆಟ್ ಅನ್ನು ಸೇರಿಸುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.