Opposition Demands Against Siddaramaiah : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಹಗರಣಗಳ ಆರೋಪಗಳ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಗೆ ವಿರೋಧಪಕ್ಷಗಳ ಬೇಡಿಕೆ !

ಬೆಂಗಳೂರು – ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ `ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ‘ (ಮುಡಾ) ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ‘ಮುಡಾ’ ಹಗರಣದ ವಿಚಾರವನ್ನು ವಿಧಾನಸಭೆಯಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷದ ಶಾಸಕರು ಬೇಡಿಕೆ ಮಾಡಿದ್ದಾರೆ. ಈ ಅಂಶಗಳಿಂದ ಬಿಜೆಪಿ ಮತ್ತು ಜೆಡಿಎಸ್ ಈ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ರಾತ್ರಿಯಿಡೀ ಧರಣಿ ಆಂದೋಲನ ನಡೆಸಿದರು.

1. ‘ಮುಡಾ’ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ಕೈವಾಡವಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ.

2. ಚರ್ಚೆಗೆ ಅನುಮತಿ ಸಿಗದ ಕಾರಣ ಪ್ರತಿಪಕ್ಷಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ ಹಾಗೂ ವಿಧಾನಸಭಾಧ್ಯಕ್ಷರ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.

3. ಈ ಪ್ರಕರಣದ ತನಿಖೆಯಲ್ಲಿ ಅವ್ಯವಹಾರ ನಡೆದಿದೆ ಎಂಬುದು ವಿರೋಧ ಪಕ್ಷಗಳು ಆರೋಪಿಸಿವೆ.

ಮುಖ್ಯಮಂತ್ರಿ ಸಹಿತ 9 ಜನರ ವಿರುದ್ಧ ದೂರು ದಾಖಲು !

ಈ ಹಿಂದೆ ‘ಮುಡಾ’ದಿಂದ ಉಂಟಾದ ನಷ್ಟವನ್ನು ಸರಿದೂಗಿಸಲು ನಕಲಿ ದಾಖಲೆಗಳನ್ನು ನಿರ್ಮಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಒಂಬತ್ತು ವ್ಯಕ್ತಿಗಳ ವಿರುದ್ಧ ದೂರು ದಾಖಲಾಗಿತ್ತು. ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ಸಿದ್ಧರಾಮಯ್ಯ, ಅವರ ಪತ್ನಿ ಪಾರ್ವತಿ, ಅಳಿಯ ಮಲ್ಲಿಕಾರ್ಜುನ ಸ್ವಾಮಿ, ಭೂಮಾಲೀಕ ದೇವರಾಜ ಮತ್ತು ಇತರ ಆರು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ.