ಒಬ್ಬ ಭಯೋತ್ಪಾದಕನ ಹತ್ಯೆ

ಶ್ರೀನಗರ – ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಜುಲೈ 27 ರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ವೀರ ಮರಣ ಹೊಂದಿದರು. ಈ ದಾಳಿಯಲ್ಲಿ ಮೇಜರ್ ಸೇರಿದಂತೆ 4 ಯೋಧರು ಗಾಯಗೊಂಡಿದ್ದಾರೆ. ಈ ಚಕಮಕಿಯಲ್ಲಿ ಒಬ್ಬ ಪಾಕಿಸ್ತಾನಿ ಭಯೋತ್ಪಾದಕನ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಆತ ಪಾಕಿಸ್ತಾನಿ ‘ಬಾರ್ಡರ್ ಆಕ್ಷನ್ ಟೀಮ್’ನ ಕಮಾಂಡೋ ಎಂದು ಶಂಕಿಸಲಾಗಿದೆ. ಕುಪ್ವಾರದ ಕಾರ್ಯಕ್ಷೇತ್ರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರು ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಭದ್ರತಾ ಪಡೆಗಳಿಗೆ ಸಿಕ್ಕಿತ್ತು. ಆನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ. (ಜಮ್ಮು- ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಭಾರತೀಯ ಸೇನೆಯ ಸೈನಿಕ ಹುತಾತ್ಮರಾಗುತ್ತಿದ್ದಾರೆ. ಆದರೂ ಇಲ್ಲಿನ ಭಯೋತ್ಪಾದನೆಯ ಮೂಲವಾದ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಳ್ಳಲು ಭಾರತ ವಿಳಂಬ ಮಾಡುತ್ತಿದೆ, ಎಂದು ಸಾಮಾನ್ಯ ಭಾರತೀಯರಿಗೆ ಅನ್ನಿಸುತ್ತದೆ ! – ಸಂಪಾದಕರು)
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath