ಮೂಡುಬಿದಿರೆಯಲ್ಲಿ ಅಕ್ರಮ ಗೋಮಾಂಸ ಸಾಗಾಟ; ಆರಿಫ್ ಮತ್ತು ಸುಲ್ತಾನ್ ಬಂಧನ

ಆರೋಪಿಗಳಾದ ಮೊಹಮ್ಮದ್ ಆರಿಫ್ ಮತ್ತು ಮೊಹಮ್ಮದ್ ಸುಲ್ತಾನ್

ಮೂಡುಬಿದಿರೆ – ಇಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಮೊಹಮ್ಮದ್ ಆರಿಫ್ (24 ವರ್ಷ) ಮತ್ತು ಮೊಹಮ್ಮದ್ ಸುಲ್ತಾನ್ (19 ವರ್ಷ) ಅವರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬೈತರಿ ಎಂಬಲ್ಲಿ ವಾಹನದಲ್ಲಿ ಗೋಮಾಂಸ ಸಾಗಿಸುತ್ತಿದ್ದರು. ಬಜಪೆ ಠಾಣೆಯ ಸಬ್ ಇನ್ಸ್ ಪೆಕ್ಟರ್ ರೇವಣಸಿದ್ದಪ್ಪ ಅವರು ಪೊಲೀಸರೊಂದಿಗೆ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಸುಮಾರು 2 ಲಕ್ಷ ಮೌಲ್ಯದ 750 ಕೆಜಿ ಗೋಮಾಂಸ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ.