ಹಂತಕರಿಗೆ ಆಶ್ರಯ ನೀಡಿರುವ ಆರೋಪ
ಬೆಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಭಾಜಪದ ಯುವ ಮೋರ್ಚಾದ ಮುಖಂಡ ಪ್ರವೀಣ ನೆಟ್ಟಾರು ಅವರನ್ನು ಜುಲೈ 2022 ರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನಿಗೆ ಆಶ್ರಯ ನೀಡಿದ ಪ್ರಕರಣದಲ್ಲಿ ಇಬ್ಬರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ.) ಆರೋಪಪಟ್ಟಿ ಸಲ್ಲಿಸಿದೆ. ಪ್ರವೀಣ ನೆಟ್ಟಾರು ಇವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ತಿಂಗಳು ರಿಯಾಜ್ ದೇಶ ಬಿಟ್ಟು ಪರಾರಿಯಾಗಲು ಪ್ರಯತ್ನಿಸುತ್ತಿರುವಾಗ ಎನ್.ಐ.ಎ. ಅಧಿಕಾರಿಗಳು ಬಂಧಿಸಿದ್ದರು. ಅವನೊಂದಿಗೆ ಮತ್ತೊಬ್ಬ ಆರೋಪಿಯ ವಿರುದ್ಧ ಎನ್.ಐ.ಎ. ಆರೋಪ ಪಟ್ಟಿಯನ್ನು ಸಲ್ಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 7 ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.