ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯಲ್ಲಿ ನಿಗಾವಹಿಸಿದ್ದೇವೆ ! – ವಿದೇಶಾಂಗ ಸಚಿವ ಎಸ್. ಜೈಶಂಕರ್

  • ಸರ್ವಪಕ್ಷಗಳ ಸಭೆಯಲ್ಲಿ ಮಾಹಿತಿ ನೀಡಿದ ! – ವಿದೇಶಾಂಗ ಸಚಿವ ಎಸ್. ಜೈಶಂಕರ್

  • ಭವಿಷ್ಯದ ಬಗ್ಗೆ ಶೇಖ್ ಹಸೀನಾ ಅವರು ಏನೂ ಹೇಳದಿರುವುದನ್ನು ಸ್ಪಷ್ಟಪಡಿಸಿದರು

ನವ ದೆಹಲಿ – ಬಾಂಗ್ಲಾದೇಶದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನಾವು ಅದರ ಮೇಲೆ ನಿಗಾವಹಿಸಿದ್ದೇವೆ, ಶೇಖ್ ಹಸೀನಾ ಬಗ್ಗೆ ನಾವು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ, ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಇವರು ಮಾಹಿತಿ ನೀಡಿದರು. ಬಾಂಗ್ಲಾದೇಶದಲ್ಲಿ ಅಸ್ಥಿರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಆಗಸ್ಟ್ 6ರಂದು ಸರ್ವಪಕ್ಷಗಳ ಸಭೆ ಕರೆದಿತ್ತು. ಆ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದರು. ‘ಬಾಂಗ್ಲಾದೇಶದಲ್ಲಿ 12-13 ಸಾವಿರ ಭಾರತೀಯರಿದ್ದಾರೆ. ಈ ಭಾರತೀಯ ವಿದ್ಯಾರ್ಥಿಗಳನ್ನು ಈಗಲೇ ವಿಮಾನಗಳ ಮೂಲಕ ಭಾರತಕ್ಕೆ ಕರೆತರುವ ಅಗತ್ಯವಿಲ್ಲ’ ಎಂದು ಅವರು ಈ ವೇಳೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಭೆಯಲ್ಲಿ ಭಾಜಪ, ಕಾಂಗ್ರೆಸ್, ಜನತಾದಳ (ಸಂಯುಕ್), ಸಮಾಜವಾದಿ ಪಕ್ಷ, ದ್ರಮುಕ, ರಾಷ್ಟ್ರೀಯ ಜನತಾ ದಳ ಮುಂತಾದ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಡಾ. ಎಸ್. ಜೈಶಂಕರ್ ಅವರು ಮಾತು ಮುಂದುವರೆಸಿ, ಶೇಖ್ ಹಸೀನಾ ಅವರು ಭಾರತದಲ್ಲಿ ಉಳಿಯುವರೋ ಅಥವಾ ಬೇರೆ ದೇಶದಲ್ಲಿ ಆಶ್ರಯ ಪಡೆಯುವರೋ ? ಈ ಬಗ್ಗೆ ಇದುವರೆಗೂ ಯಾವುದೇ ನಿರ್ಧಾರ ಆಗಿಲ್ಲ. ನಾನು ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದ್ದೇನೆ. ಅವರು ತಮ್ಮ ಭವಿಷ್ಯದ ಯೋಜನೆಗಳ ಬಗ್ಗೆ ಏನನ್ನೂ ಹೇಳಲಿಲ್ಲ ಎಂದರು.