|
ಬೆಂಗಳೂರು – ಸುಮಾರು 3 ಸಾವಿರ ಮಹಿಳೆಯರ ಮೇಲೆ ಲೈಂಗಿಕ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ ರೇವಣ್ಣ ಅವರ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಸಂಬಂಧಗಳ ಸಾವಿರಾರು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದವು. ಈ ವಿಡಿಯೋಗಳು ಸತ್ಯವಾಗಿದೆಯೆಂದು ಸ್ಪಷ್ಟವಾಗಿದೆ. ಅದರಲ್ಲಿ ಯಾವುದೇ ಟ್ಯಾಂಪರಿಂಗ್ (‘ಎಡಿಟ್ ‘ ಅಥವಾ ‘ಮಾರ್ಫ್’) ಮಾಡಲಾಗಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಿದೆ. ಇದರಿಂದಾಗಿ ಈ ಪ್ರಕರಣದ ಆಳವಾದ ತನಿಖೆ ನಡೆಸಲು ವಿಶೇಷ ತನಿಖಾ ತಂಡಕ್ಕೆ ಮತ್ತಷ್ಟು ಬಲ ಸಿಕ್ಕಿದೆ.
ಈ ಎಲ್ಲಾ ವೀಡಿಯೊಗಳಲ್ಲಿ ಮನುಷ್ಯನ ಮುಖವನ್ನು ತೋರಿಸಲಾಗಿಲ್ಲ. ಇದರಿಂದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳಲ್ಲಿ ಇದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸದ್ಯಕ್ಕೆ ವಿಡಿಯೋ ಮಾತ್ರ ಸತ್ಯವಾಗಿದೆಯೆಂದು ವರದಿಯಿಂದ ತಿಳಿದುಬಂದಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ವಿಡಿಯೋದಲ್ಲಿ ತೋರಿಸಲಾಗಿರುವ ವ್ಯಕ್ತಿ ಪ್ರಜ್ವಲ್ ರೇವಣ್ಣ ಆಗಿದ್ದಾನೆಯೇ ಎನ್ನುವುದು ಸ್ಪಷ್ಟವಾಗಲಿದೆ. ಈ ವರದಿ ಬಂದ ಬಳಿಕ ವಿಶೇಷ ತನಿಖಾ ತಂಡದ ಅಧಿಕಾರಿಗಳಿಂದ ತನಿಖೆ ತೀವ್ರಗೊಂಡಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಲಿದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.