ಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ ಮುಹಮ್ಮದ್ ಯೂನಸ್ ಆಯ್ಕೆ

ಢಾಕಾ (ಬಾಂಗ್ಲಾದೇಶ) – ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಬಾಂಗ್ಲಾದೇಶದಲ್ಲಿ ಈಗ ಮಧ್ಯಂತರ ಸರಕಾರ ಸ್ಥಾಪನೆಯಾಗಲಿದೆ. ಅದಕ್ಕಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ಅುವರನ್ನು ರಾಷ್ಟ್ರಪತಿ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಆಗಸ್ಟ್ 6 ರ ರಾತ್ರಿ ಬಾಂಗ್ಲಾದೇಶದ ಅಧ್ಯಕ್ಷರ ಭವನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಇವರೊಂದಿಗೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಪ್ರತಿನಿಧಿಗಳು ಜೊತೆಗೆ ಮೂರೂ ರಕ್ಷಣಾಪಡೆಯ ಮುಖ್ಯಸ್ಥರು ಉಪಸ್ಥಿತರಿದ್ದರು ಎಂದು ಹೇಳಲಾಗಿದೆ.
ಮುಹಮ್ಮದ್ ಯೂನಸ್ ಇವರು ಶೇಖ್ ಹಸೀನಾ ಇವರ ವಿರೋಧಿ ಎಂದು ಪರಿಗಣಿಸಲಾಗಿದೆ. ಹಾಗೆಯೇ ಅವರು ಭಾರತ ವಿರೋಧಿ ಹೇಳಿಕೆಗಳನ್ನು ನೀಡುತ್ತಿರುತ್ತಾರೆ.