ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು, ಕರಿಯಬಾರದು ಮುಂತಾದ ನಿಯಮಗಳನ್ನು ಪಾಲಿಸಬೇಕು. ಈ ದಿನ ಭೂಮಿಯನ್ನು ಅಗೆಯುವುದು ಕೂಡ ನಿಷೇಧಿಸಲಾಗಿದೆ. ಆದರೆ ವರ್ಷವಿಡೀ ಈ ಕೃತಿಗಳನ್ನು ಮಾಡುವುದರ ಮೇಲೆ ಯಾವುದೇ ನಿರ್ಬಂಧವಿಲ್ಲ. ಹಾಗಾದರೆ ನಾಗರಪಂಚಮಿಯಂದು ಈ ಕೃತಿಗಳನ್ನು ನಿಷೇಧಿಸಿರುವ ಕಾರಣ ಮತ್ತು ಅವುಗಳನ್ನು ಮಾಡುವುದರಿಂದಾಗುವ ಹಾನಿಯ ಬಗ್ಗೆ ತಿಳಿದುಕೊಳ್ಳೋಣ.
ನಾಗದೇವತೆಯು ಇಚ್ಛೆಯ ಪ್ರತೀಕ. ಇಚ್ಛೆಯ ಪ್ರವರ್ತಕ (ಅಂದರೆ ಇಚ್ಛೆಗೆ ವೇಗ ನೀಡುವ) ಮತ್ತು ಸಕಾಮ ಇಚ್ಛೆಯನ್ನು ಪೂರ್ಣಗೊಳಿಸುವ ದೇವತೆಯೂ ಹೌದು. ನಾಗದೇವರು ಇಚ್ಛೆಗೆ ಸಂಬಂಧಿಸಿದ ಕನಿಷ್ಠ ದೇವತೆಯಾಗಿದ್ದಾರೆ. ನಾಗರಪಂಚಮಿಯಂದು ಸಂಬಂಧಸಿದ ತತ್ತ್ವದ ದೇವತೆಗಳಿಂದ ನಿರ್ಮಾಣವಾಗುವ ಇಚ್ಛಾ ಲಹರಿಗಳು ಭೂಮಿಯ ಮೇಲೆ ಅವತರಿಸುವುದರಿಂದ ವಾಯುಮಂಡಲದಲ್ಲಿ ನಾಗದೇವತೆಯ ತತ್ತ್ವದ ಪ್ರಮಾಣವು ಹೆಚ್ಚಿರುತ್ತದೆ. ಈ ದಿನದಂದು ಭೂಮಿಯಲ್ಲಿರುವ ಇಚ್ಛಾಜನ್ಯ ದೇವತಾಸ್ವರೂಪ ಲಹರಿಗಳು ಘನವಾಗುವ ಪ್ರಮಾಣವೂ ಹೆಚ್ಚಿರುತ್ತದೆ. ಹೆಚ್ಚುವುದು, ಕೊಯ್ಯುವುದು, ಭೂಮಿ ಉಳುವುದು ಮುಂತಾದ ಕೃತಿಗಳಿಂದ ರಜ-ತಮಕ್ಕೆ ಸಂಬಂಧಿಸಿದ ಇಚ್ಛಾಲಹರಿಗಳು (ಅಂದರೆ ದೇವತಾಜನ್ಯ ಇಚ್ಛಾಲಹರಿಗಳ ಕಾರ್ಯವನ್ನು ವಿರೋಧಿಸುವ ಲಹರಿಗಳು) ವಾಯುಮಂಡಲದಲ್ಲಿ ಹೊರಸೂಸುವ ಪ್ರಮಾಣವು ಹೆಚ್ಚಾಗುವುದರಿಂದ ಈ ದಿನದಂದು ನಾಗದೇವತೆಯ ಲಹರಿಗಳಿಗೆ ತಮ್ಮ ಕಾರ್ಯ ಮಾಡುವಲ್ಲಿ ಅಡಚಣೆಗಳು ಬರಬಹುದು. ಈ ಕಾರಣದಿಂದ ನಾಗರಪಂಚಮಿಯಂದು ಹೆಚ್ಚುವುದು, ಕರಿಯುವುದು, ಉಳುಮೆ, ಹೊಲಿಗೆ ಮುಂತಾದ ಕೃತಿಗಳನ್ನು ಮಾಡುವುದರಿಂದ ಪಾಪ ತಗಲಬಹುದು.