ರಾಜಕೀಯ ಪಕ್ಷಗಳಿಂದ ಪ್ರತಿಭಟನೆ !
ಕೋಲಕಾತಾ (ಬಂಗಾಳ) – ನಗರದ ಸರಕಾರಿ ಆಸ್ಪತ್ರೆಯಲ್ಲಿ ತರಬೇತಿ ನಿರತ ಮಹಿಳಾ ವೈದ್ಯೆಯ ಶವ ಪತ್ತೆಯಾಗಿದೆ. ವೈದ್ಯೆಯ ಮೇಲೆ ಅಮಾನುಷವಾಗಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಕಂಡು ಬಂದಿದೆ. ಮೃತದೇಹದ ಮೇಲೆ ಹಲವೆಡೆ ಗಾಯಗಳಾಗಿವೆ. ಕೋಲಕಾತಾ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಅನುಮಾನಾಸ್ಪದ ಚಟುವಟಿಕೆಗಾಗಿ ವ್ಯಕ್ತಿಯೊಬ್ಬನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಈ ಹತ್ಯೆಯನ್ನು ವಿರೋಧಿಸಿ ವೈದ್ಯಕೀಯ ವಿದ್ಯಾರ್ಥಿಗಳು, ಬಿಜೆಪಿ, ಕಾಂಗ್ರೆಸ್ ಮತ್ತು ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಆಸ್ಪತ್ರೆಯ ಹೊರಗೆ ಪ್ರತಿಭಟನೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೃತ ಮಹಿಳೆಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಮತ್ತು ಬಂಗಾಳ ಬಿಜೆಪಿ ಸಹ-ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಮಮತಾ ಬ್ಯಾನರ್ಜಿ ಸರಕಾರವು ಈ ಹತ್ಯೆ ವಿಷಯವನ್ನು ಮರೆ ಮಾಚಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮಹಿಳೆಯರ ವಿರುದ್ಧದ ಇಂತಹ ಅಪರಾಧಗಳನ್ನು ಬಂಗಾಳ ಸರ್ಕಾರವು ಇನ್ನೆಷ್ಟು ದಿನಗಳ ಕಾಲ ಹೀಗೆ ನಿರ್ಲಕ್ಷ್ಯ ಮಾಡುವುದು ಎಂದವರು ಪ್ರಶ್ನಿಸಿದರು.
ಸಂಪಾದಕೀಯ ನಿಲುವುಎಲ್ಲಿಯವೆರೆಗೆ ಅತ್ಯಾಚಾರಿಗಳಿಗೆ ನಡುರಸ್ತೆಯಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗುವುದಿಲ್ಲವೋ, ಅಲ್ಲಿಯವರೆಗೆ ಇಂತಹ ಕಾಮುಕರಿಗೆ ಕಾನೂನಿನ ಬಿಸಿ ತಟ್ಟುವುದಿಲ್ಲ ! |