ದಾವಣಗೆರೆ – ದಾವಣಗೆರೆ ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಅಂತಿಮ ವರ್ಷದ ಇ-ಕಾಮರ್ಸ್ ವಿಷಯದ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳ ಬದಲು ಉತ್ತರ ಪತ್ರಿಕೆ ನೀಡಿದ ವಿಚಿತ್ರ ಘಟನೆ ನಡೆದಿದೆ. ಇದರಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಮನೆಗೆ ಮರಳಬೇಕಾಯಿತು. ಸದ್ಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಸುಮಾರು 600 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.