ಬಾಂಗ್ಲಾದೇಶದ ಮಧ್ಯಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರಿಂದ ಪ್ರಧಾನಿ ಮೋದಿಯವರಿಗೆ ದೂರವಾಣಿ ಕರೆ !
ನವ ದೆಹಲಿ – ಬಾಂಗ್ಲಾದೇಶದ ಮಧ್ಯಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ ಅವರು ಪ್ರಧಾನಿ ಮೋದಿಗೆ ಕರೆ ಮಾಡಿದ್ದಾರೆ. ಈ ಮಾಹಿತಿಯನ್ನು ಸ್ವತಃ ಪ್ರಧಾನಿ ಮೋದಿಯವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಪ್ರೊಫೆಸರ್ ಮುಹಮ್ಮದ್ ಯೂನಸ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೇನೆ ಎಂದು ಪ್ರಧಾನಿ ಮೋದಿ ಬರೆದಿದ್ದಾರೆ. ಅಲ್ಲಿನ ಪ್ರಸ್ತುತ ಪರಿಸ್ಥಿತಿಯ ಕುರಿತು ವಿಚಾರ ವಿನಿಮಯ ನಡೆಯಿತು. ಸ್ಥಿರ, ಶಾಂತಿಯುತ ಮತ್ತು ಪ್ರಗತಿಪರ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪುನರುಚ್ಚರಿಸಿದರು. ಬಾಂಗ್ಲಾದೇಶದಲ್ಲಿರುವ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಯೂನಸ್ ಭರವಸೆ ನೀಡಿದ್ದಾರೆ.
ಸಂಪಾದಕೀಯ ನಿಲುವುರಕ್ಷಣೆಯ ಭರವಸೆ ಮಾತ್ರವಲ್ಲ, ಸಂತ್ರಸ್ತ ಹಿಂದೂಗಳಿಗೆ ನಷ್ಟಪರಿಹಾರವನ್ನೂ ನೀಡಬೇಕು ! |