ಬೆಳಗಾವಿಯಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ವೇಳೆ ವಾಹನ ಪಲ್ಟಿ: 3 ಕರುಗಳು ಸಾವು

ಬೆಳಗಾವಿ – ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕ್ಯಾಂಟರ್ ವಾಹನ ಪಲ್ಟಿಯಾದ ಘಟನೆ ತಾಲೂಕಿನ ಚಿಕ್ಕಬಾಗೇವಾಡಿ ಬಳಿ ನಡೆದಿದೆ. ಚಾಲಕ ಸೇರಿ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ. ಈ ವಾಹನದಲ್ಲಿ 12 ಹಸುಗಳನ್ನು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪೊಲೀಸರು ಸ್ಥಳಕ್ಕೆ ಬಂದು ಉಳಿದ 9 ಹಸುಗಳನ್ನು ಹಿಡಿದು ಗೋಶಾಲೆಗೆ ಕಳುಹಿಸಿದ್ದಾರೆ. ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಸಂಪಾದಕೀಯ ನಿಲುವು

ಗೋಹತ್ಯೆ ನಿಷೇಧವಿದ್ದರೂ ಅಕ್ರಮ ಸಾಗಾಟ, ಗೋಹತ್ಯೆ ಆಗುತ್ತದೆ ಇದು ಸರಕಾರ ಮತ್ತು ಪೊಲೀಸರಿಗೆ ನಾಚಿಕೆಗೇಡಿನ ಸಂಗತಿ !