India Flag Upside Down : ಸಿಂದಗಿ ನಗರದ ಪುರಸಭೆ ಅಧಿಕಾರಿಗಳು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿದರು !

ವಿಜಯಪುರ – ಇಲ್ಲಿನ ಸಿಂದಗಿ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳು ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಘಟನೆ ನಡೆದಿದೆ. ಧ್ವಜಾರೋಹಣ ಮಾಡಿದವರು ಇದನ್ನು ಗಮನಿಸದ ಕಾರಣ ಸತತ 10 ಗಂಟೆಗಳ ಕಾಲ ರಾಷ್ಟ್ರಧ್ವಜ ತಲೆಕೆಳಗಾಗಿ ಹಾರಾಡುತ್ತಲೇ ಇತ್ತು. ಇದನ್ನು ಗಮನಿಸಿದ ಸ್ಥಳೀಯರು ಅದನ್ನು ಕೆಳಗಿಳಿಸಿದ್ದಾರೆ. ಈ ಘಟನೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.

ಸಂಪಾದಕೀಯ ನಿಲುವು

ಇಂತಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು !