2 ಶಿಕ್ಷಕರು, ಪ್ರಾಂಶುಪಾಲರು ಸೇರಿ 11 ಮಂದಿ ಬಂಧನ
ಕೃಷ್ಣಗಿರಿ (ತಮಿಳುನಾಡು) – ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ ನಕಲಿ ‘ನ್ಯಾಷನಲ್ ಕೆಡೆಟ್ ಕಾರ್ಪ್ಸ್’ (ಎನ್‌ಸಿಸಿ) ಶಿಬಿರದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದು, ಕನಿಷ್ಠ 12 ಬಾಲಕಿಯರು ಲೈಂಗಿಕ ಕಿರುಕುಳ ಅನುಭವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಶಿಬಿರದ ಆಯೋಜಕರು, ಶಾಲೆಯ ಪ್ರಾಂಶುಪಾಲರು, 2 ಶಿಕ್ಷಕರು, ಪತ್ರಕರ್ತ ಸೇರಿ 11 ಮಂದಿಯನ್ನು ಬಂಧಿಸಲಾಗಿದೆ.
1. ಶಾಲೆಯ ಮೊದಲ ಮಹಡಿಯಲ್ಲಿರುವ ಸಭಾಂಗಣದಲ್ಲಿ ಬಾಲಕಿಯರಿಗೆ ವ್ಯವಸ್ಥೆ ಮಾಡಲಾಗಿತ್ತು, ಬಾಲಕರನ್ನು ನೆಲ ಮಹಡಿಯಲ್ಲಿ ಇರಿಸಲಾಗಿತ್ತು. ಶಿಬಿರದ ನಿರ್ವಹಣೆಯನ್ನು ಯಾವ ಶಿಕ್ಷಕರಿಗೂ ವಹಿಸಿರಲಿಲ್ಲ. ಆಮಿಷವೊಡ್ಡಿ ಸಭಾಂಗಣದಿಂದ ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯರು ಆರೋಪಿಸಿದ್ದಾರೆ.
2. ಶಾಲಾ ಅಧಿಕಾರಿಗಳು ಲೈಂಗಿಕ ದೌರ್ಜನ್ಯದ ಬಗ್ಗೆ ತಿಳಿದಿದ್ದರು; ಆದರೆ ಪೊಲೀಸರಿಗೆ ಮಾಹಿತಿ ನೀಡುವ ಬದಲು ವಿಷಯವನ್ನು ಹತ್ತಿಕ್ಕಲು ನಿರ್ಧರಿಸಿದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಡಿ ಎಂದು ವಿದ್ಯಾರ್ಥಿಗಳಿಗೆ ತಿಳಿಸಲಾಗಿತ್ತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ತಂಗದುರೈ ಇವರು ಮಾಧ್ಯಮಗಳಿಗೆ ತಿಳಿಸಿದರು.