ಮಂಗಳೂರು – ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ನ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದೂ ಮೋಹನ್ ನಾಯಕ್ ಅನ್ನು ಜುಲೈ 18, 2018 ರಂದು ಬಂಧಿಸಲಾಗಿತ್ತು.
ಈ ಪ್ರಕರಣದ 11ನೇ ಆರೋಪಿಯಾಗಿದ್ದ ಮೋಹನ್ ನಾಯಕ್‌ಗೆ ಡಿಸೆಂಬರ್ 2023ರಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್‌ನ ಜಾಮೀನು ಆದೇಶವನ್ನು ಪ್ರಶ್ನಿಸಿ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಕವಿತಾ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಸುಪ್ರೀಂ ಕೋರ್ಟ್ ಮುಂದೆ ಕರ್ನಾಟಕ ಸರಕಾರದ ಪರ ವಕೀಲ ಸಿದ್ಧಾರ್ಥ್ ಲೂಥ್ರಾ ಇವರು, “ಇದುವರೆಗೆ 137 ಸಾಕ್ಷಿಗಳನ್ನು ವಿಚಾರಣೆ ಮಾಡಲಾಗಿದೆ. ಆದರೆ, ಅವುಗಳನ್ನು ಕೈಬಿಡಲಾಗಿದೆ. ಪ್ರಾಸಿಕ್ಯೂಷನ್ 150 ಸಾಕ್ಷಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಇನ್ನು 100 ಸಾಕ್ಷಿಗಳು ಮಾತ್ರ ವಿಚಾರಣೆಗೆ ಬಾಕಿ ಎಂದು ಹೇಳಿದರು. ನ್ಯಾಯಾಲಯವು, ಮೋಹನ್ ಅವರು ವಿಚಾರಣೆಗೆ ಸಹಕರಿಸಿದ್ದಾರೆ ಮತ್ತು ಇದುವರೆಗೆ ಯಾವುದೇ ಮುಂದೂಡಿಕೆಯನ್ನು ಕೋರಿಲ್ಲ ಎಂಬ ಅಂಶವನ್ನು ಗಮನಿಸಿದೆ ಎಂದು ವರದಿಯಲ್ಲಿ ಹೇಳಿದೆ.