ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸಲ್ಮಾನ್ ಪತ್ನಿಗೆ ತಲಾಖ್ ನೀಡಿದ ಪತಿ !

ಬಹರಿಚ್ (ಉತ್ತರ ಪ್ರದೇಶ) – ಅಯೋಧ್ಯೆಯಲ್ಲಿನ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕಾಗಿ ಪತಿ ತನಗೆ ವಿಚ್ಛೇದನ ನೀಡಿದ್ದಾರೆ ಎಂದು ಮುಸಲ್ಮಾನ್ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಅಲ್ಲದೆ, ಈ ಮಹಿಳೆಯು ಮಾವನ ಕಡೆಯವರು ಹೊಡೆದು ಚಿತ್ರಹಿಂಸೆ ನೀಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ಆಕೆಯ ಪತಿ ಮತ್ತು ಆತನ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

2017ರಲ್ಲಿ ಸರ್ವೋಚ್ಚ ನ್ಯಾಯಾಲಯವು ತ್ರಿವಳಿ ತಲಾಖ್ ಪದ್ಧತಿಯನ್ನು ಅಸಂವಿಧಾನಿಕ ಎಂದು ಘೋಷಿಸಿತ್ತು. ಅದರ ನಂತರ, ಜುಲೈ 2019 ರಲ್ಲಿ ಕೇಂದ್ರ ಸರಕಾರವು ತ್ರಿವಳಿ ತಲಾಖ್ ವಿರುದ್ಧ ಕಾನೂನನ್ನು ಮಾಡಿತ್ತು.

ಸಂಪಾದಕೀಯ ನಿಲುವು

ಮತಾಂಧ ಮುಸಲ್ಮಾನರಲ್ಲಿ ಭಾಜಪ ಮತ್ತು ಹಿಂದೂದ್ವೇಷ ಎಷ್ಟರಮಟ್ಟಿಗೆ ಆಳವಾಗಿದೆ, ಇದು ಗಮನಕ್ಕೆ ಬರುತ್ತದೆ ! ಹೀಗೆ ದೇಶಕ್ಕೆ ನಿಷ್ಠರಾಗಿ ಹಿಂದೂಗಳೊಂದಿಗೆ ಸಭ್ಯತೆ ತೋರಿಸುವರೇ ?