ಶ್ರೀಕೃಷ್ಣಜನ್ಮಾಷ್ಟಮಿಯಂದು ಇವುಗಳನ್ನು ಮಾಡಿ !

೧. ತಮ್ಮ ಬಂಧು ಮಿತ್ರರಿಗೆ ಕಿರುಸಂದೇಶಗಳನ್ನು ಕಳುಹಿಸಿ ಅವರಿಗೆ ಶ್ರೀಕೃಷ್ಣನ ನಾಮಜಪವನ್ನು ಮಾಡಲು ಹೇಳಿರಿ!

೨. ಶ್ರೀಕೃಷ್ಣನ ದೇವಸ್ಥಾನದಲ್ಲಿ ಸ್ವಚ್ಛತೆಯ ಸೇವೆಯನ್ನು ಮಾಡಿ !

೩. ಶ್ರೀಕೃಷ್ಣನ ಅವಮಾನವಾಗುತ್ತಿರುವುದು ಕಂಡು ಬಂದಲ್ಲಿ ಅದನ್ನು ತಡೆಗಟ್ಟಿರಿ !

೪. ಈ ದಿನ ಕೃಷ್ಣತತ್ತ್ವವು ಹೆಚ್ಚು ಪ್ರಮಾಣದಲ್ಲಿರುವುದರಿಂದ ಅದನ್ನು ಗ್ರಹಿಸಲು ‘ಓಂ ನಮೋ ಭಗವತೇ ವಾಸುದೇವಾಯ’ ನಾಮಜಪವನ್ನು ಮಾಡಿ !

ಶ್ರೀಕೃಷ್ಣ ಜಯಂತಿಯಂದು ಶ್ರೀಕೃಷ್ಣತತ್ತ್ವವು ಇತರ ದಿನಗಳ ತುಲನೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಅಂದರೆ ೧ಸಾವಿರ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಆದುದರಿಂದ ಶ್ರೀಕೃಷ್ಣನ ಚೈತನ್ಯದಾಯಕ ತತ್ತ್ವಲಹರಿಗಳು ಪೃಥ್ವಿಯ ಮೇಲೆ ಹೆಚ್ಚು ಪ್ರಮಾಣದಲ್ಲಿ ಆಕರ್ಷಿತವಾಗುತ್ತವೆ. ಈ ಲಹರಿಗಳಿಂದ ಜೀವಕ್ಕೆ ವ್ಯಾವಹಾರಿಕ ಮತ್ತು ಆಧ್ಯಾತ್ಮಿಕ ಈ ಎರಡೂ ಸ್ತರಗಳಲ್ಲಿ ಲಾಭವಾಗುತ್ತದೆ. ಈ ಕಾರ್ಯನಿರತ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ.

ಕೃಷ್ಣಗಾಯತ್ರಿ

ದೇವಕೀನಂದನಾಯ ವಿದ್ಮಹೇ | ವಾಸುದೇವಾಯ ಧೀಮಹಿ |
ತನ್ನೋ ಕೃಷ್ಣಃ ಪ್ರಚೋದಯಾತ್ ||

ಅರ್ಥ : ನಾವು ದೇವಕೀಪುತ್ರ ಕೃಷ್ಣನನ್ನು ಅರಿತಿದ್ದೇವೆ. ವಾಸುದೇವನ ಧ್ಯಾನ ಮಾಡುತ್ತೇವೆ. ಆ ಕೃಷ್ಣನು ನಮ್ಮ ಬುದ್ಧಿಗೆ ಸತ್ ಪ್ರೇರಣೆ ಕೊಡಲಿ.