ಕಾಮುಕ ಮತಾಂಧ !
ಹುಬ್ಬಳ್ಳಿ – ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಒಂದು ಆಘಾತಕಾರಿ ಘಟನೆ ನಡೆದಿದೆ. ಇಲ್ಲಿನ ಮಾಸೂಮ ಹುಲಮನಿ ಎಂಬ ಮತಾಂಧ ಯುವಕನು ಓರ್ವ 15 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಹುಬ್ಬಳ್ಳಿಯಲ್ಲಿನ ಕಸಬಾ ಪೊಲೀಸರು ಆರೋಪಿ ಮಾಸೂಮ ಹುಲಮನಿಯನ್ನು ವಶಕ್ಕೆ ಪಡೆದರು.
ಮಾಸೂಮ ಹುಲಮನಿ ಪೆಂಟರ್ ಆಗಿ ಕೆಲಸ ಮಾಡುತ್ತಿದ್ದನು. ಅವನು ಸಂತ್ರಸ್ತ ಅಪ್ರಾಪ್ತ ಬಾಲಕನಿಗೆ ಮೊಬೈಲ ಕೊಡಿಸುವುದಾಗಿ ಆಮಿಷ ತೋರಿಸಿ ಆತನನ್ನು ತನ್ನ ಬಲೆಯಲ್ಲಿ ಸಿಲುಕಿಸಿ, ಆತನಿಗೆ ಲೈಂಗಿಕ ಕಿರುಕುಳ ನೀಡಲು ಆರಂಭಿಸಿದನು. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.