ಶಾಲಾ ಹಾಸ್ಟೆಲ್‌ನಲ್ಲಿ ಮಕ್ಕಳಿಂದ ಧೂಮಪಾನ ಮತ್ತು ಮದ್ಯಪಾನ !

ಹಾಸನ – ಬೇಲೂರು ತಾಲೂಕಿನ ಬಿಕ್ಕೋಡಿಯ 10ನೇ ಪೂರ್ವ ಸರಕಾರಿ ಮಕ್ಕಳ ಹಾಸ್ಟೆಲ್‌ನಲ್ಲಿ ಮಕ್ಕಳು ಕುಡಿದು ತೇಲಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಸ್ಟೆಲ್ ಸಿಬ್ಬಂದಿಯ ಅನುಪಸ್ಥಿತಿಯಲ್ಲಿ ಮಕ್ಕಳು ಧೂಮಪಾನ ಮತ್ತು ಮದ್ಯಪಾನ ಮಾಡುತ್ತಿರುವುದು ಕಂಡುಬಂದಿದೆ. ಇದರೊಂದಿಗೆ, ‘ವೈಟ್ನರ್’ (ಕಾಗದದ ಮೇಲಿನ ಬರವಣಿಗೆಯನ್ನು ಅಳಿಸಲು ಬಳಸುವ ಬಿಳಿ ಬಣ್ಣದ ದ್ರವ) ಸಹ ಸೇವಿಸುತ್ತಿರುವುದು ಕಂಡುಬಂದಿದೆ.

ಇಲ್ಲಿನ ಹಾಸ್ಟೆಲ್‌ನ ಟೆರೇಸ್‌ನಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಅಷ್ಟೇ ಅಲ್ಲ, ಮಕ್ಕಳು ಮಾದಕ ಪದಾರ್ಥ ಸೇವನೆ ಮಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಪಾದಕೀಯ ನಿಲುವು

ವಿದ್ಯಾರ್ಥಿಗಳಿಗೆ ಧರ್ಮ ಶಿಕ್ಷಣ ನೀಡಿ ಅವರಿಂದ ಸಾಧನೆ ಮಾಡಿಸಿಕೊಳ್ಳದೇ ಇದ್ದರಿಂದ ಅವರ ಜೀವನದಲ್ಲಿ ನಿಜವಾದ ಆನಂದ ಏನು? ಮತ್ತು ಅದನ್ನು ಹೇಗೆ ಪಡೆಯುವುದು? ಅವರಿಗೆ ಇದು ಅರ್ಥವಾಗದೆ ವ್ಯಸನದ ಮೂಲಕ ಸಂತೋಷವನ್ನು ಕಂಡುಕೊಳ್ಳಲು ಮತ್ತು ಜೀವನವನ್ನು ಅಸ್ತವ್ಯಸ್ತಗೊಳಿಸಲು ಪ್ರಯತ್ನಿಸುತ್ತಾರೆ !