ಭಾಗ್ಯನಗರ (ತೆಲಂಗಾಣ) – ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಓರ್ವ ವಿದ್ಯಾರ್ಥಿನಿಯ ಮೇಲೆ ಮೂವರು ಯುವಕರು ಪದೇ ಪದೇ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜ್ಯದ ಸಿದ್ದಿಪೇಟೆ ಜಿಲ್ಲೆಯಲ್ಲಿ ನಡೆದಿದೆ. ಇದರಿಂದ ಆಕೆ ಗರ್ಭಿಣಿಯಾದಳು. ಸಂತ್ರಸ್ತೆಯ ಪೋಷಕರಿಗೆ ವಿಷಯ ತಿಳಿದ ನಂತರ ಅವರು ಅತ್ಯಾಚಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಪೊಲೀಸರು ಮೂವರ ವಿರುದ್ಧ ‘ಪೋಕ್ಸೋ’ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿದ್ದಾರೆ.
ಸಿದ್ಧಿಪೇಟೆ ಸಹಾಯಕ ಪೊಲೀಸ್ ಆಯುಕ್ತ ಜಿ. ಮಧು ಇವರು ನೀಡಿದ ಮಾಹಿತಿಯ ಪ್ರಕಾರ, ಸಂತ್ರಸ್ತೆ ಹುಡುಗಿ ಅನಾರೋಗ್ಯಕ್ಕೆ ಒಳಗಾದ ನಂತರ ತಾಯಿ ಆಕೆಯನ್ನು ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಗರ್ಭಿಣಿ ಎಂದು ತಿಳಿದುಬಂದಿದೆ. ಸಂತ್ರಸ್ತೆ ನೀಡಿದ ಮಾಹಿತಿಯ ಪ್ರಕಾರ, ಆರೋಪಿಯು 2024 ರ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಆಕೆಯ ತಾಯಿ ಮನೆಯಲ್ಲಿ ಇಲ್ಲದಿದ್ದಾಗ ಯುವಕರು ಪದೇ ಪದೇ ಆಕೆಯ ಮನೆಗೆ ಹೋಗಿ ಅತ್ಯಾಚಾರ ಮಾಡಿದ್ದಾರೆ.
ಸಂಪಾದಕೀಯ ನಿಲುವುಇದು ಸಮಾಜದ ನೈತಿಕತೆಯ ಅಧಃಪತನದ ಮತ್ತೊಂದು ಉದಾಹರಣೆ |