ಮೆಕ್ಕಾ ಬಗ್ಗೆ ಅವಹೇಳನಕಾರಿ ಪೋಸ್ಟ್: ಹಿಂದೂ ಯುವಕನನ್ನು ತಾವಾಗಿಯೇ ಬಂಧಿಸಿದ ಪೋಲೀಸರು !

ಮಂಗಳೂರು – ಇನ್‌ಸ್ಟಾಗ್ರಾಮ್‌ನಲ್ಲಿ ಮೆಕ್ಕಾ ಬಗ್ಗೆ ಅವಹೇಳನಕಾರಿ ವಿಷಯವನ್ನು ಪ್ರಸಾರ ಮಾಡಿದ್ದರಿಂದ ಹಿಂದೂ ಯುವಕನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಯುವಕನು ಈ ಪೋಸ್ಟ್ ಮಾಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈ ಬರಹದಿಂದ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತರುವ ಮೂಲಕ ಸಮಾಜದಲ್ಲಿ ಧಾರ್ಮಿಕ ಉದ್ವಿಗ್ನತೆ ನಿರ್ಮಾಣ ಮಾಡುವ ಸಂದೇಶ ನೀಡಲಾಗುತ್ತಿತ್ತು ಹೀಗಾಗಿ ನಾವೇ ಸ್ವತಃ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಯುವಕನನ್ನು ಬಂಧಿಸಿ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ.

ಸಂಪಾದಕೀಯ ನಿಲುವು

ಹಿಂದೂಗಳ ಶ್ರದ್ಧಾಸ್ಥಾನಗಳನ್ನು ಅವಮಾನಿಸುವವರ ವಿರುದ್ಧ ಪೊಲೀಸರು ಎಂದಾದರೂ ತಾವಾಗಿಯೇ ಇಂತಹ ಕ್ರಮ ಕೈಗೊಳ್ಳುತ್ತಾರೆಯೇ ?