ಕಾಶ್ಮೀರದಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ

ಉಧಮಪುರ (ಕಾಶ್ಮೀರ) – ಇಲ್ಲಿ ಭದ್ರತಾ ಪಡೆಯೊಂದಿಗೆ ನಡೆದ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಸೆಪ್ಟೆಂಬರ್ 11 ರಂದು ಬೆಳಗ್ಗೆ ಉಧಮಪುರದ ಖಂಡ್ರಾ ಟಾಪ್ ಅರಣ್ಯದಲ್ಲಿ 2-3 ಭಯೋತ್ಪಾದಕರು ಅಡಗಿರುವ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತ್ತು. ಆನಂತರ ಪೊಲೀಸರೊಂದಿಗೆ ಶೋಧ ಕಾರ್ಯ ನಡೆಸಲಾಯಿತು. ಮಧ್ಯಾಹ್ನ 12.50 ನಿಮಿಷಕ್ಕೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಪ್ರತಿಯಾಗಿ ಸೈನಿಕರೂ ಗುಂಡಿನ ದಾಳಿ ಮಾಡಿದರು. ಸುಮಾರು 4 ಗಂಟೆಗಳ ಕಾಲ ನಡೆದ ಚಕಮಕಿಯಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ.

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ

ಸೆಪ್ಟೆಂಬರ್ 11 ರಂದು ರಾತ್ರಿ 2:30 ಕ್ಕೆ ಪಾಕಿಸ್ತಾನಿ ಸೈನಿಕರು ಜಮ್ಮು-ಕಾಶ್ಮೀರದ ಅಖ್ನೂರ್‌ನಲ್ಲಿಯ ಗಡಿಯಲ್ಲಿ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಓರ್ವ ಯೋಧ ಗಾಯಗೊಂಡಿದ್ದಾನೆ. ಈ ದಾಳಿಗೆ ಪ್ರತಿಯಾಗಿ ಗಡಿ ಭದ್ರತಾ ಪಡೆಯ ಯೋಧರೂ ಗುಂಡಿನ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ಎಷ್ಟು ಹಾನಿ ಆಗಿದೆ ? ಇದು ಈವರೆಗೂ ಗೊತ್ತಾಗಿಲ್ಲ. ಈ ಘಟನೆಯ ನಂತರ ಗಡಿಯಲ್ಲಿ ಬಿಗಿ ಬಂದೋಬಸ್ತು ಏರ್ಪಡಿಸಲಾಗಿದೆ.

ಸಂಪಾದಕೀಯ ನಿಲುವು

ಕಾಶ್ಮೀರವನ್ನು ಭಯೋತ್ಪಾದಕರಿಂದ ಮುಕ್ತಗೊಳಿಸಲು ಪಾಕಿಸ್ತಾನವನ್ನು ವಿಶ್ವದ ಭೂಪಟದಿಂದ ಅಳಿಸಿಹಾಕುವುದೊಂದೇ ದಾರಿ, ಇದನ್ನು ಸರಕಾರವು ಗಮನದಲ್ಲಿಟ್ಟುಕೊಂಡು ಅದಕ್ಕನುಸಾರವಾಗಿ ಕೃತಿ ಮಾಡಬೇಕು !