ನ್ಯೂಯಾರ್ಕ್‌ನಲ್ಲಿ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ

  • ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ ಬರಹ

  • ಭಾರತೀಯ ರಾಯಭಾರಿ ಕಚೇರಿಯಿಂದ ಖಂಡನೆ

ನ್ಯೂಯಾರ್ಕ್ (ಅಮೇರಿಕಾ) – ನ್ಯೂಯಾರ್ಕ ನಲ್ಲಿರುವ ಮೆಲಹಿಲ್ಲೆ ಪ್ರದೇಶದ ಸ್ವಾಮಿನಾರಾಯಣ ದೇವಸ್ಥಾನವನ್ನು ಧ್ವಂಸಗೊಳಿಸಲಾಗಿದೆ. ದೇವಸ್ಥಾನದ ಗೋಡೆಗಳ ಮೇಲೂ ಭಾರತ ವಿರೋಧಿ ಘೋಷಣೆಗಳನ್ನು ಬರೆಯಲಾಗಿದೆ. ಈ ಘಟನೆಯ ನಂತರ, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರಿ ತೀವ್ರ ಶಬ್ದಗಳಲ್ಲಿ ಖಂಡಿಸಿದೆ. ರಾಯಭಾರ ಕಚೇರಿ ಒಂದು ಸುತ್ತೋಲೆ ಹೊರಡಿಸಿ, ಈ ಘಟನೆಯ ಕುರಿತು ಅಮೇರಿಕೆಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿದೆ.
ದೇವಸ್ಥಾನದ ಆಡಳಿತ ಮಂಡಳಿಯು, ಕಳೆದ ಕೆಲವು ದಿನಗಳಲ್ಲಿ ಉತ್ತರ ಅಮೇರಿಕದ ಕೆಲವು ದೇವಸ್ಥಾನಗಳಲ್ಲಿ ಇದೇ ರೀತಿಯ ಘಟನೆಗಳು ನಡೆದಿವೆ. ಈ ಎಲ್ಲಾ ಘಟನೆಗಳನ್ನು ನಾವು ಖಂಡಿಸುತ್ತೇವೆ ಮತ್ತು ಅಮೇರಿಕಾ ಸರಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ನಾವು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಶಾಂತಿ ಕಾಪಾಡುವಂತೆ ಅವರು ಎಲ್ಲರಿಗೂ ಮನವಿ ಮಾಡಿದ್ದಾರೆ ಎಂದು ಹೇಳಿದರು.

ಸಂಪಾದಕೀಯ ನಿಲುವು

ಅಮೇರಿಕದಲ್ಲಿ ಕಾನೂನು ಸುವ್ಯವಸ್ಥೆ ಮೂರಾಬಟ್ಟೆಯಾಗಿರುವುರಿಂದ ಹಿಂದೂ ದೇವಸ್ಥಾನಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಇದುವರೆಗೆ ಇಂತಹ ಘಟನೆಗಳಲ್ಲಿ ಎಷ್ಟು ಆರೋಪಿಗಳಿಗೆ ಅಮೇರಿಕಾ ಶಿಕ್ಷೆ ನೀಡಿದೆ ?