Eid in Lions School : ಕಾರ್ಕಳ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್-ಇ-ಮಿಲಾದ್ ಆಚರಣೆ !

  • ಹಿಂದೂ ವಿದ್ಯಾರ್ಥಿಗಳ ಪೋಷಕರಿಂದ ವಿರೋಧ

  • ಶಾಲಾ ನಿರ್ದೇಶಕರು ಭಾಜಪ ಮುಖಂಡ

ಕಾರ್ಕಳ – ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚೆರಿಪೇಟೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ನಿಮಿತ್ತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಘಟನೆಯ ವಿಡಿಯೋ ವ್ಯಾಪಕವಾಗಿ ಪ್ರಸಾರವಾಗಿತ್ತು. ಇದಕ್ಕೆ ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆಕೆ. ಶಾಲೆಯ ನಿರ್ದೇಶಕರು ಸ್ಥಳೀಯ ಭಾಜಪ ಮುಖಂಡ ಎನ್ನಲಾಗಿದೆ. ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಅವರು ಕಾರ್ಯಕ್ರಮದ ವೇದಿಕೆಯಲ್ಲಿ ಭಾಗವಹಿಸಿದ್ದರಿಂದ ಆಕ್ರೋಶ ಭುಗಿಲೆದ್ದಿದೆ. ಈ ಕಾರ್ಯಕ್ರಮದಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಬಲವಂತವಾಗಿ ಮುಂದೆ ಕೂರಿಸಲಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆ ಮತ್ತು ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಿ ! – ಶ್ರೀ. ಪ್ರಮೋದ್ ಮುತಾಲಿಕ್

ಶ್ರೀರಾಮ ಸೇನೆಯ ಸ್ಥಾಪಕ-ಅಧ್ಯಕ್ಷ ಶ್ರೀ. ಪ್ರಮೋದ್ ಮುತಾಲಿಕ್ ಈ ಘಟನೆ ಕುರಿತು ಮಾತನಾಡಿ, ಇದು ಹಿಂದೂ ವಿದ್ಯಾರ್ಥಿಗಳನ್ನು ಅನ್ಯ ಧರ್ಮದ ಅನುಯಾಯಿಗಳನ್ನಾಗಿ ಮಾಡುವ ಪ್ರಯತ್ನವಾಗಿದೆ. ಸಂಬಂಧಪಟ್ಟ ಇಲಾಖೆಗಳು ಮತ್ತು ಶಿಕ್ಷಣ ಅಧಿಕಾರಿಗಳು ಕೂಡಲೇ ಗಮನ ಹಿರಿಸಿ ಆಯೋಜಕರು ಮತ್ತು ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಭವಿಷ್ಯದಲ್ಲಿ ತೀವ್ರ ಆಂದೋಲನ ನಡೆಸಲಾಗುವುದು ಎಂದು ಹೇಳಿದರು.