‘ಭಾರತ ಮಾತಾ ಕೀ ಜೈ’ ಎಂದು ಹೇಳಿದರೆ ಏನೂ ತಪ್ಪಿಲ್ಲ ! – ಕರ್ನಾಟಕ ಹೈಕೋರ್ಟ್

ಭಾರತ ಮಾತಾ ಕೀ ಜೈ’ ಎಂದು ಹೇಳುವವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದ ಕರ್ನಾಟಕ ಉಚ್ಚ ನ್ಯಾಯಾಲಯ

ಬೆಂಗಳೂರು – ‘ಭಾರತ ಮಾತಾ ಕೀ ಜೈ’ ಘೋಷಣೆ ಕೂಗಿದ್ದಕ್ಕಾಗಿ ಮುಸ್ಲಿಮರು ಸಲ್ಲಿಸಿದ್ದ ದೂರಿನ ಮೇರೆಗೆ 5 ಜನರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಉಚ್ಚ ನ್ಯಾಯಾಲಯ ರದ್ದುಗೊಳಿಸಿದೆ. ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವುದು ದ್ವೇಷಪೂರಿತ ವಾಕ್ಯವಲ್ಲ ಮತ್ತು ಅದನ್ನು ‘ಧರ್ಮಗಳ ನಡುವೆ ವೈಷಮ್ಯ ಅಥವಾ ದ್ವೇಷವನ್ನು ಉತ್ತೇಜಿಸುವುದು’ ಎಂದು ಅರ್ಥೈಸಲೂ ಸಾಧ್ಯವಿಲ್ಲ ಎಂದು ಉಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.

ರಾಜ್ಯದ ಉಳ್ಳಾಲ ತಾಲೂಕಿನ ಐವರು ನಿವಾಸಿಗಳ ವಿರುದ್ಧ ಪೊಲೀಸರು ಜೂನ್‌ನಲ್ಲಿ ದೂರು ದಾಖಲಿಸಿದ್ದರು. ಜೂನ್ 9ರ ರಾತ್ರಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಈ 5 ಜನರ ಮೇಲೆ ಮುಸ್ಲಿಮರು ದಾಳಿ ನಡೆಸಿದ್ದರು. ಈ ವೇಳೆ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದರು. ಇದಾದ ಬಳಿಕ ಮುಸ್ಲಿಮರು ಕೂಡ ಘೋಷಣೆ ಕೂಗಿದವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು.

ಸಂಪಾದಕೀಯ ನಿಲುವು

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಭಾರತ ಮಾತಾ ಕೀ ಜೈ ಎಂದು ಹೇಳುವವರ ಮೇಲೆ ಪ್ರಕರಣ ದಾಖಲಾಗಿರುವುದು ಆಶ್ಚರ್ಯವೇನಲ್ಲ! ಇಂತಹ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದ ಹಿಂದೂಗಳಿಗೆ ಇದು ನಾಚಿಕೆಗೇಡಿನ ಸಂಗತಿ!