ಮೈಸೂರು – ಕೆ.ಆರ್.ಎಸ್. ಬ್ಯಾಕ್ ವಾಟರ್‍ನ ಪರಿಸರದಲ್ಲಿ ತಡರಾತ್ರಿಯವರೆಗೂ ಪಾರ್ಟಿ ನಡೆಯುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ ನಂತರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಕೆಲವರು ತಪ್ಪಿಸಿಕೊಳ್ಳಲು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಪಾರ್ಟಿಯಲ್ಲಿ ಭಾಗವಹಿಸಿದ್ದ 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ಬಿಗಿಯಾಗಿ ವಿಚಾರಣೆ ನಡೆಸುತ್ತಿದ್ದಾರೆ. ಆಯೋಜಕರು ಮಾರ್ಟಿಗಾಗಿ ತಲಾ 2 ಲಕ್ಷ ರೂಪಾಯಿ ಶುಲ್ಕ ನಿಗದಿ ಮಾಡಿದ್ದರು.
150ಕ್ಕೂ ಹೆಚ್ಚು ಯುವಕ ಯುವತಿಯರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಪಾರ್ಟಿಯಲ್ಲಿ ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಮದ್ಯ ಮತ್ತು ಸಿಗರೇಟ್ ಪತ್ತೆಯಾಗಿದೆ. ಹಾಜರಿದ್ದ ಎಲ್ಲರ ರಕ್ತದ ಮಾದರಿಗಳನ್ನು ತೆಗೆದುಕೊಳ್ಳಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಹೇಳಿದರು.
ಸಂಪಾದಕೀಯ ನಿಲುವುಸಮಾಜದಲ್ಲಿ ಪೊಲೀಸರು ಸ್ಥಾನ ಕಳೆದುಕೊಂಡಿರುವುದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ. ಇದಕ್ಕೆ ಕಾರಣ ಪೊಲೀಸರ ಭ್ರಷ್ಟಾಚಾರ, ದುರಹಂಕಾರ ಮತ್ತು ನಂಬಿಕೆ ಕಳೆದುಕೊಂಡಿರುವುದು ! |