ಇಸ್ರೈಲ್ ಮತ್ತು ಲೆಬನಾನ್ ನಡುವಿನ ಸಂಘರ್ಷ ಉತ್ತುಂಗಕ್ಕೇ

ಇಸ್ರೇಲ್ ಪ್ರಧಾನಿ ನೆತನ್ಯಾಹು ಅವರೊಂದಿಗೆ ಚರ್ಚಿಸಿದ ಪ್ರಧಾನಿ ನರೇಂದ್ರ ಮೋದಿ !

ನವದೆಹಲಿ – ಇಸ್ರೈಲ್ ಸೆಪ್ಟೆಂಬರ್ 28 ರಂದು ಲೆಬನಾನ್ ನ ರಾಜಧಾನಿ ಬೈರುತ್‌ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ ಲೆಬನಾನ್‌ನ ಪ್ರತ್ಯೇಕತಾವಾದಿ ಭಯೋತ್ಪಾದಕ ಸಂಘಟನೆ ಹೆಜಬುಲ್ಲಾದ ಮುಖ್ಯಸ್ಥ ಹಸನ್ ನಸ್ರುಲ್ಲಾ ಕೊಲ್ಲಲ್ಪಟ್ಟನು. ಈ ಮೂಲಕ ಒಬ್ಬ ಪ್ರಮುಖ ಭಯೋತ್ಪಾದಕನ ದಾಳಿಯನ್ನು ಕೊನೆಗೊಳಿಸಿದೆ ಎಂದು ಹೇಳಲಾಗುತ್ತಿದೆ; ಆದರೆ ಇಲ್ಲಿ ಇನ್ನೂ ಘರ್ಷಣೆಗಳು ನಡೆಯುತ್ತಿವೆ. ಇಸ್ರೈಲ್ ಮತ್ತು ಲೆಬನಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಕುರಿತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಚರ್ಚಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪಶ್ಚಿಮ ಏಷ್ಯಾದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ‘ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ. ಆದಷ್ಟು ಬೇಗ ಶಾಂತಿ ಮತ್ತು ಸ್ಥಿರತೆಯನ್ನು ಸ್ಥಾಪಿಸುವ ಪ್ರಯತ್ನಗಳಿಗೆ ಭಾರತದ ಬೆಂಬಲ ಸದಾ ಇರುತ್ತದೆ’, ಎಂದು ಪ್ರಧಾನಿ ನರೇಂದ್ರ ಮೋದಿಯವರು ಈ ಸಮಯದಲ್ಲಿ ಭರವಸೆ ನೀಡಿದ್ದಾರೆ.