ನೇಪಾಳದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಮತ್ತು ಭೂಕುಸಿತ; 220 ಕ್ಕೂ ಹೆಚ್ಚು ಜನರ ಸಾವು !

ಕಠ್ಮಂಡು (ನೇಪಾಳ) – ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅನೇಕ ಪ್ರಾಂತ್ಯಗಳಲ್ಲಿ ಹಾನಿಯಾಗಿದೆ. ಪ್ರವಾಹ ಮತ್ತು ಭೂಕುಸಿತದಿಂದ ಇದುವರೆಗೆ 220 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಹಾಗೂ ಅನೇಕ ಜನರು ನಾಪತ್ತೆಯಾಗಿದ್ದಾರೆ.
ನೇಪಾಳ ಸೇನಾ ಪಡೆ ಮತ್ತು ಪೊಲೀಸ್ ಪಡೆಗಳನ್ನು ಸಹಾಯ ಕಾರ್ಯಕ್ಕಾಗಿ ವಿವಿಧ ಪ್ರದೇಶಗಳಿಗೆ ಕಳುಹಿಸಲಾಗಿದೆ. ಪ್ರವಾಹ ಸಂತ್ರಸ್ತರಿಗೆ ತಾತ್ಕಾಲಿಕ ಪರಿಹಾರ ಒದಗಿಸಲಾಗುತ್ತಿದೆ. ನೇಪಾಳದ ಗೃಹ ವ್ಯವಹಾರಗಳ ಸಚಿವಾಲಯದ ವಕ್ತಾರ ರಿಷಿರಾಮ್ ತಿವಾರಿ ಮಾತನಾಡಿ, ಸಂಚಾರವನ್ನು ಪುನರಾರಂಭಿಸಲು ಹೆದ್ದಾರಿಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.