Fine Muslims Spitting Food: ಆಹಾರ ಪದಾರ್ಥಗಳಲ್ಲಿ ಉಗುಳಿದರೆ 1 ಲಕ್ಷ ರೂಪಾಯಿವರೆಗೆ ದಂಡ !

ಉತ್ತರಾಖಂಡದಲ್ಲಿ ಬಿಜೆಪಿ ಸರಕಾರದ ನಿರ್ಧಾರ

ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಭಾಜಪ ಸರಕಾರವು ಆಹಾರದಲ್ಲಿ ಉಗುಳುವಂತಹ ಘಟನೆಗಳ ಮೇಲೆ ಕ್ರಮ ಕೈಗೊಳ್ಳಲು 1 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸುವ ಘೋಷಣೆ ಮಾಡಿದೆ. ಇದರೊಂದಿಗೆ ಹೊಟೇಲ್ ಮತ್ತು ಢಾಬಾಗಳನ್ನು ನಡೆಸುವವರ ಮತ್ತು ಅದರಲ್ಲಿ ಕೆಲಸ ಮಾಡುವ ಕಾರ್ಮಿಕರನ್ನು ಪೊಲೀಸರು ಕಡ್ಡಾಯವಾಗಿ ಪರಿಶೀಲಿಸಬೇಕು. ಅಲ್ಲದೆ ಅಡುಗೆ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಅವಶ್ಯಕವಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಉತ್ತರಾಖಂಡನ ಆರೋಗ್ಯ ಸಚಿವ ಧನಸಿಂಹ ರಾವತ್ ಇವರು, ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಅನೈರ್ಮಲ್ಯ ಅಥವಾ ಸಮಾಜ ವಿರೋಧಿ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲುವು

ದಂಡ ಮಾತ್ರವಲ್ಲ, ಜೈಲು ಶಿಕ್ಷೆಯೂ ಆಗುವುದು ಅವಶ್ಯಕವಾಗಿದೆ !