ಗೋವತ್ಸ ದ್ವಾದಶಿ (ಅಕ್ಟೋಬರ್‌ ೨೮)

ಹಬ್ಬವನ್ನು ಆಚರಿಸುವ ಪದ್ಧತಿ

ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತ ಇರುವ ಆಕಳ ಪೂಜೆಯನ್ನು ಮಾಡುತ್ತಾರೆ.

ಗೋವತ್ಸದ್ವಾದಶಿಯ ಮಹತ್ವ

ಭಾರತೀಯ ಸಂಸ್ಕೃತಿಯಲ್ಲಿ ಆಕಳಿಗೆ ತುಂಬ ಮಹತ್ವವಿದೆ. ಅವಳನ್ನು ಮಾತೆಯೆಂದು ಸಂಬೋಧಿಸಲಾಗುತ್ತದೆ. ಅವಳು ಸಾತ್ತ್ವಿಕಳಾಗಿರುವುದರಿಂದ ಅವಳ ಪೂಜೆಯನ್ನು ಮಾಡಿ, ಎಲ್ಲರೂ ಅವಳ ಸಾತ್ತ್ವಿಕ ಗುಣಗಳನ್ನು ಸ್ವೀಕರಿಸುವುದಿರುತ್ತದೆ. ತನ್ನ ಸಹವಾಸದಿಂದ ಇತರರನ್ನು ಪಾವನಗೊಳಿಸುವ, ತನ್ನ ಹಾಲಿನಿಂದ ಸಮಾಜವನ್ನು ಬಲಿಷ್ಠಗೊಳಿಸುವ, ಕೃಷಿಗಾಗಿ ತನ್ನ ಸೆಗಣಿಯಿಂದ ಗೊಬ್ಬರವನ್ನು ನೀಡುವ, ಕೃಷಿಗೆ ಉಪಯುಕ್ತವಾದ ಎತ್ತುಗಳಿಗೆ ಜನ್ಮ ನೀಡುವ, ಶ್ರೀಕೃಷ್ಣನಿಗೆ ಪ್ರಿಯವಾಗಿರುವ ಹಾಗೂ ಎಲ್ಲ ದೇವತೆಗಳು ತನ್ನಲ್ಲಿ ವಾಸಿಸುವಂತಹ ಯೋಗ್ಯತೆಯಿರುವ ಗೋಮಾತೆಯನ್ನು ಈ ದಿನದಂದು ಪೂಜೆ ಮಾಡಬೇಕು. ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆ ಹಾಗೂ ಪೂಜ್ಯ ಭಾವದಿಂದ ಅವಳನ್ನು ಪೂಜಿಸಲಾಗುತ್ತದೆ ಅಲ್ಲಿನ ವ್ಯಕ್ತಿಗಳು, ಆ ಸಮಾಜ ಮತ್ತು ಆ ರಾಷ್ಟ್ರವು ನಿಶ್ಚಿತವಾಗಿ ಸಮೃದ್ಧಿಗೊಳ್ಳುತ್ತದೆ. ಇಂತಹ ಗೋಮಾತೆಯನ್ನು ಅವಳ ಕರುಗಳ ಸಹಿತ ಪೂಜಿಸಿ ದೀಪಾವಳಿ ಆಚರಿಸಬೇಕು.

– ಪ.ಪೂ. ಪರಶರಾಮ ಪಾಂಡೆ ಮಹಾರಾಜರು.