ದೀಪಜ್ಯೋತಿ ನಮೋಸ್ತುತೆ !

ಶುಭಂ ಕರೋತಿ ಕಲ್ಯಾಣಂ ಆರೋಗ್ಯಂ ಧನಸಮ್ಪದಾಮ್ |

ಶತ್ರುಬುದ್ಧಿವಿನಾಶಾಯ ದೀಪಜ್ಯೋತಿ ನಮೋಸ್ತುತೆ ||

ದೀಪಾವಳಿಯಂದು ಸಾಯಂಕಾಲ ಮನೆಯೊಳಗೆ ಮತ್ತು ಹೊರಗೆ ಸಾಲಾಗಿ ದೀಪಗಳನ್ನು ಹಚ್ಚಿಡಬೇಕು. ದೀಪಾವಳಿ ಎಂದರೆ ದೀಪಗಳ ಸಾಲು. ಇದರಿಂದ ಮನೆಗೆ ಅಪ್ರತಿಮ ಶೋಭೆಯುಂಟಾಗಿ ಉತ್ಸಾಹವು ಬರುತ್ತದೆ ಮತ್ತು ಆನಂದವಾಗುತ್ತದೆ. ‘ದೀಪ’ ಎನ್ನುವ ಶಬ್ದದ ನಿಜವಾದ ಅರ್ಥವು ಎಣ್ಣೆ ಮತ್ತು ಬತ್ತಿಯ ಜ್ಯೋತಿ ಎಂದಾಗಿದೆ. ‘ಅಂಧಃಕಾರದಿಂದ ಜ್ಯೋತಿಯೆಡೆಗೆ ಅಂದರೆ ಪ್ರಕಾಶದೆಡೆಗೆ ಹೋಗು’ ಎನ್ನುವುದು ಶ್ರುತಿಯ ಆಜ್ಞೆಯಾಗಿದೆ. ದೀಪದಾನದಿಂದ ಲಕ್ಷ್ಮೀಯು ಸ್ಥಿರವಾಗುತ್ತಾಳೆ. ಆನಂದದಿಂದ ದೀಪಾವಳಿ ಉತ್ಸವವನ್ನು ಆಚರಿಸಬೇಕು. ಇದರಿಂದ ಮನೆಯಲ್ಲಿ ಸುಖಸಮೃದ್ಧಿ ಇರುತ್ತದೆ.