
ತಿರುವನಂತಪುರಂ (ಕೇರಳ) – ಕೇರಳದ ನೀಲೇಶ್ವರಂನಲ್ಲಿರುವ ವೀರಾರಕಾವು ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಲು ದೊಡ್ಡ ಪ್ರಮಾಣದಲ್ಲಿ ಪಟಾಕಿಗಳನ್ನು ತರಿಸಲಾಗಿತ್ತು. ದೇವಸ್ಥಾನದ ಪರಿಸರದಲ್ಲಿಯೇ ಒಂದು ಪಕ್ಕಕ್ಕೆ ಈ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಈ ಸ್ಥಳದಲ್ಲಿ ಅಕ್ಟೋಬರ್ 28 ರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿತು. ಹಬ್ಬದ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಈ ಬೆಂಕಿಯಿಂದಾಗಿ 150 ಜನರು ಗಾಯಗೊಂಡರು. ಇವರಲ್ಲಿ 8 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳಿಗೆ ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳು ಪೊಲೀಸ ಪಡೆಯೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ಘಟನೆಯ ತನಿಖೆ ಪ್ರಾರಂಭವಾಗಿದೆ.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath