India Deserves In SUPERPOWERS : ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತವನ್ನು ಸೇರಿಸಬೇಕು ! – ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಹೇಳಿಕೆ

ಮಾಸ್ಕೋ (ರಷ್ಯಾ) – ನಾವು ವಿವಿಧ ಕ್ಷೇತ್ರಗಳಲ್ಲಿ ಭಾರತದೊಂದಿಗಿನ ಸಂಬಂಧಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಭಾರತ ಒಂದು ಶ್ರೇಷ್ಠ ದೇಶವಾಗಿದೆ. ಆರ್ಥಿಕ ಬೆಳವಣಿಗೆಯ ವಿಷಯದಲ್ಲಿಯೂ, ಇದು ದೊಡ್ಡ ಅರ್ಥವ್ಯವಸ್ಥೆಯಲ್ಲಿ ಪ್ರಮುಖವಾಗಿದೆ. ಇದರ ಅಭಿವೃದ್ಧಿ ದರ ಶೇ.7.4ರಷ್ಟಿದೆ. ರಷ್ಯಾ ಮತ್ತು ಭಾರತದ ನಡುವಿನ ಸಹಕಾರ ಪ್ರತಿ ವರ್ಷ ಹೆಚ್ಚುತ್ತಿದೆ. ವಿಶ್ವದ ಮಹಾಶಕ್ತಿಗಳ ಪಟ್ಟಿಯಲ್ಲಿ ಭಾರತ ಸೇರ್ಪಡೆಯಾಗಬೇಕು ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಭಾರತವನ್ನು ಶ್ಲಾಘಿಸಿದ್ದಾರೆ. ಅವರು ರಷ್ಯಾದ ಸೊಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು.

ಪುಟಿನ್ ಮಾತು ಮುಂದುವರಿಸಿ,

1. ಭಾರತವು 1 ಶತಕೋಟಿ 40 ಕೋಟಿ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಿದೆ ಮತ್ತು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಇದರ ಸಂಸ್ಕೃತಿ ಬಹಳ ಪುರಾತನವಾಗಿದೆ ಮತ್ತು ಭವಿಷ್ಯದಲ್ಲಿ ಅದರ ಅಭಿವೃದ್ಧಿ ಹೊಂದುವ ಸಾಧ್ಯತೆ ಹೆಚ್ಚಿದೆ.

2. ಭಾರತ ಮತ್ತು ರಷ್ಯಾ ನಡುವೆ ರಕ್ಷಣಾ ಕ್ಷೇತ್ರದಲ್ಲಿಯೂ ಸಹಕಾರ ಹೆಚ್ಚುತ್ತಿದೆ. ಭಾರತೀಯ ಸೇನೆಯು ರಷ್ಯಾದ ಅನೇಕ ಶಸ್ತ್ರಾಸ್ತ್ರಗಳನ್ನು ಇವೆ. ಇದರಿಂದ ಎರಡು ದೇಶಗಳ ನಡುವೆ ವಿಶ್ವಾಸ ಎದ್ದು ಕಾಣುತ್ತಿದೆ. ನಾವು ನಮ್ಮ ಶಸ್ತ್ರಾಸ್ತ್ರಗಳನ್ನು ಕೇವಲ ಭಾರತಕ್ಕೆ ಮಾರಾಟ ಮಾಡುವುದು ಮಾತ್ರವಲ್ಲ, ನಾವು ಅನೇಕ ಶಸ್ತ್ರಾಸ್ತ್ರಗಳ ರಚನೆಗಳನ್ನು ಕೂಡ ಒಟ್ಟಿಗೆ ಮಾಡುತ್ತಿದ್ದೇವೆ ಎಂದು ಹೇಳಿದರು.