|
ಲಾಹೋರ (ಪಾಕಿಸ್ತಾನ) – ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ನಡೆಯುವ ಅಪರಾಧದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಗುರುನಾನಕ ದೇವ ಅವರ 555 ನೇ ಜನ್ಮದಿನದ ಸಂದರ್ಭದಲ್ಲಿ ನಾನಕಾನಾ ಸಾಹಿಬ ಗುರುದ್ವಾರಕ್ಕೆ ಭೇಟಿ ನೀಡಿದ್ದ ಸಿಂಧ್ ಪ್ರಾಂತ್ಯದ ಲಾರಕಾನಾದ ರಾಜೇಶ ಕುಮಾರ ಅವರ ಮೇಲೆ ದರೋಡೆಕೋರರು ಗುಂಡು ಹಾರಿಸಿ ಹತ್ಯೆ ಮಾಡಿದರು. ಲಾಹೋರನಿಂದ 60 ಕಿಲೋಮೀಟರ್ ದೂರದಲ್ಲಿರುವ ಪಂಜಾಬ ಪ್ರಾಂತ್ಯದ ಮನನ್ವಾಲಾ-ನಾನಕಾನಾ ಸಾಹಿಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ರಾಜೇಶ ಕುಮಾರ ತಮ್ಮ ಸ್ನೇಹಿತ ಮತ್ತು ಸೋದರ ಮಾವನೊಂದಿಗೆ ಕಾರಿನಲ್ಲಿ ಹೋಗುತ್ತಿದ್ದರು. ಆಗ ಮೂವರು ಶಸ್ತ್ರಸಜ್ಜಿತ ದರೋಡೆಕೋರರು ಅವರ ವಾಹನವನ್ನು ತಡೆದು ಅವರ ಬಳಿಯಿದ್ದ 4 ಲಕ್ಷ 50 ಸಾವಿರ ಪಾಕಿಸ್ತಾನಿ ರೂಪಾಯಿಗಳು ಹಾಗೂ ಚಾಲಕನಿಂದ 10 ಸಾವಿರ ರೂಪಾಯಿಗಳನ್ನು ಲೂಟಿ ಮಾಡಿದರು. ರಾಜೇಶ್ ಇದನ್ನು ವಿರೋಧಿಸಿದಾಗ ದರೋಡೆಕೋರರು ಅವರ ಮೇಲೆ ಗುಂಡು ಹಾರಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ರಾಜೇಶ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು. ಈ ಪ್ರಕರಣದಲ್ಲಿ ಇದುವರೆಗೂ ಯಾರನ್ನೂ ಬಂಧಿಸಲಾಗಿಲ್ಲ.