ಬೆಂಗಳೂರು (ಕರ್ನಾಟಕ) – ರಾಮೇಶ್ವರಂ ಕೆಫೆ ರೆಸ್ಟೋರೆಂಟ್‌ನಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳು ಪಾಕಿಸ್ತಾನ ಮತ್ತು ಕುಖ್ಯಾತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್‌ನೊಂದಿಗೆ ಸಂಪರ್ಕ ಹೊಂದಿದ್ದರು ಎಂದು ರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದೆ. ಫೆಬ್ರವರಿ 2024 ರಲ್ಲಿ ನಡೆದ ಈ ಸ್ಫೋಟದ ಪ್ರಕರಣದಲ್ಲಿ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹ್ಮದ್ ತಾಹಾ, ಮಾಜಾ ಮುನೀರ್ ಅಹ್ಮದ್ ಮತ್ತು ಮುಝಮ್ಮಿಲ್ ಷರೀಫ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ಇವರೆಲ್ಲರೂ ಪಾಕಿಸ್ತಾನಿ ಹ್ಯಾಂಡ್ಲರ್‌ಗಳ ಸೂಚನೆಯಂತೆ ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಕೆಲಸ ಮಾಡುತ್ತಿದ್ದರು. ಈ ಸ್ಫೋಟದಲ್ಲಿನ ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಆತ ಪಾಕಿಸ್ತಾನದಲ್ಲಿ ಇರುವನೆಂದು ಸಂಶಯವಿದೆ.
1. ಒಟ್ಟು 6 ಭಯೋತ್ಪಾದಕರು ಸೇರಿ ಕೆಫೆಯಲ್ಲಿ ಸ್ಫೋಟವನ್ನು ಮಾಡಿದ್ದರು. ಇವರೆಲ್ಲರೂ ಇಸ್ಲಾಮಿಕ್ ಸ್ಟೇಟ್‌ನೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಬಾಂಬ್ ಸ್ಫೋಟ ನಡೆಸುವ ಬಗ್ಗೆ ತರಬೇತಿ ಪಡೆದಿದ್ದರು. ವಾರದವರೆಗೆ ನಡೆದ ಈ ತರಬೇತಿಗಾಗಿ ಅವರು ಆನ್‌ಲೈನ್‌ನಲ್ಲಿ ಸ್ಫೋಟಕಗಳನ್ನು ತಯಾರಿಸುವ ವಸ್ತುಗಳನ್ನು ಖರೀದಿಸಿದ್ದರು.
2. 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರತಿಷ್ಠಾಪನೆಯ ದಿನದಂದು ಬೆಂಗಳೂರಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸ್ಫೋಟವನ್ನು ನಡೆಸುವ ಯೋಜನೆಯಿತ್ತು; ಆದರೆ ಆ ದಿನ ಅಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಿದ್ದರಿಂದ ಆರೋಪಿಗಳಿಗೆ ಅದು ಸಾಧ್ಯವಾಗಲಿಲ್ಲ. ಕೊನೆಗೆ ಅವರು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಮಾಡಿದರು.