ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ನಗರದ ಒಂದು ಅಪಾರ್ಟ್‌ಮೆಂಟ್‌ನಲ್ಲಿ ಹಿಂದೂ ಕುಟುಂಬದ 4 ಸದಸ್ಯರು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು 32 ವರ್ಷದ ಜಾನಿ ಬಿಸ್ವಾಸ್, ಅವರ ಗರ್ಭಿಣಿ ಪತ್ನಿ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕೊಲೆಗಳನ್ನು ಮತಾಂಧ ಮುಸ್ಲಿಮರು ಮಾಡಿದ್ದಾರೆ ಎಂದು ಶಂಕಿಸಲಾಗಿದೆ.
1. ಪೊಲೀಸರ ಹೇಳಿಕೆಯಂತೆ, ಪತ್ನಿ ಮತ್ತು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ಜಾನಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2. ಈ ಭೀಕರ ಘಟನೆಯ ನಂತರ ಇಡೀ ಪ್ರದೇಶದಲ್ಲಿ ಸಾಕಷ್ಟು ಉದ್ವಿಗ್ನತೆ ಮತ್ತು ಭಯದ ವಾತಾವರಣವಿದೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸುವ ಮೂಲಕ ಹಿಂದೂ ಸಮುದಾಯದಲ್ಲಿ ಹೆಚ್ಚುತ್ತಿರುವ ಭಯವನ್ನು ಕಡಿಮೆ ಮಾಡಲು ಪ್ರಯತ್ನಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಸಂಪಾದಕೀಯ ನಿಲುವುಬಾಂಗ್ಲಾದೇಶದಲ್ಲಿ ಹಿಂದೂಗಳು ಸರ್ವನಾಶವಾಗುತ್ತಾರೆ, ಎಂದು ಹೇಳಲು ಜ್ಯೋತಿಷಿಗಳ ಅಗತ್ಯವಿಲ್ಲ ! |