ಮಥುರಾ ಮತ್ತು ಕಾಶಿ ಪ್ರಕರಣಗಳ ವಿಚಾರಣೆ ತ್ವರಿತ ನ್ಯಾಯಾಲಯದಲ್ಲಿ ನಡೆಯಬೇಕು !

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿದ್ದ ಅಧಿವೇಶದಲ್ಲಿ ಹಿಂದೂ ಸಂಘಟನೆಗಳ ಆಗ್ರಹ

ವೃಂದಾವನ (ಉತ್ತರ ಪ್ರದೇಶ) – ಮಥುರಾ ಮತ್ತು ಕಾಶಿಯಲ್ಲಿನ ದೇವಾಲಯಗಳಿಗೆ ಸಂಬಂಧಿಸಿದ ವಿವಾದವನ್ನು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು ಎಂದು ಇಲ್ಲಿ ನಡೆಯುತ್ತಿರುವ ಅಧಿವೇಶದಲ್ಲಿ ಭಾಗವಹಿಸಿರುವ ಹಿಂದೂ ರಾಷ್ಟ್ರವಾದಿ ಸಂಘಟನೆಗಳು ಒತ್ತಾಯಿಸಿವೆ. ಮಥುರಾ ಜಿಲ್ಲೆಯ ವೃಂದಾವನದಲ್ಲಿರುವ ಬಾಲಾಜಿ ಧಾಮ್ ದೇವಸ್ಥಾನ ಪ್ರದೇಶದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಈ ಅಧಿವೇಶನವನ್ನು ಆಯೋಜಿಸಲಾಗಿತ್ತು. ಮಥುರಾ ಮತ್ತು ಕಾಶಿಯಲ್ಲಿ ದೇವಸ್ಥಾನ ವಿವಾದಗಳಿಗೆ ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಹಿಂದೂ ಜನಜಾಗೃತಿ ಸಮಿತಿಯು ಈ ಸಂದರ್ಭದಲ್ಲಿ ಘೋಷಿಸಿತು.

ಭಾರತದ ಸಾಂಸ್ಕೃತಿಕ ಅಸ್ಮಿತೆಯನ್ನು ಕಾಪಾಡಲು ಹಿಂದೂ ರಾಷ್ಟ್ರದ ಸ್ಥಾಪನೆ ಅಗತ್ಯ ! – ಸದ್ಗುರು ಡಾ. ಚಾರುದತ್ತ ಪಿಂಗಳೆ

ಸದ್ಗುರು (ಡಾ.) ಚಾರುದತ್ತ ಪಿಂಗಳೆ

ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು ಡಾ. ಚಾರುದತ್ತ ಪಿಂಗಳೆ ಇವರು ಸಭಿಕರನ್ನುದ್ದೇಶಿಸಿ ಮಾತನಾಡಿ, ಭಾರತದ ಸಾಂಸ್ಕೃತಿಕ ಅಸ್ಮಿತೆ ಮತ್ತು ಸಮಗ್ರತೆಯನ್ನು ಕಾಪಾಡಲು ಹಿಂದೂ ರಾಷ್ಟ್ರ ಸ್ಥಾಪನೆ ಅಗತ್ಯ ಎಂದರು. ಅಮೆರಿಕದ ಪ್ಯೂ ರೀಸರ್ಚ್ ಸೆಂಟರ್‍ನ ವರದಿಯನ್ನು ಉಲ್ಲೇಖಿಸಿದ ಅವರು, 2050 ರ ವೇಳೆಗೆ ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ ಎಂದು ಎಚ್ಚರಿಸಿದ್ದಾರೆ. ಸದ್ಗುರು ಡಾ. ಪಿಂಗಳೆ ಇವರು ಮಣಿಪುರ ಮತ್ತು ಮಿಜೋರಾಂನಲ್ಲಿ ಸ್ವತಂತ್ರ ಕ್ರೈಸ್ತ ರಾಜ್ಯಗಳನ್ನು ರಚಿಸುವ ಬೆದರಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಹಾಗೆಯೇ ವಕ್ಫ್ ಕಾನೂನುಗಳನ್ನು ದುರುಪಯೋಗಪಡಿಸಿಕೊಂಡು ‘ಲ್ಯಾಂಡ್ ಜಿಹಾದ್’ ನಡೆಯುತ್ತಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ಅಧಿವೇಶನದಲ್ಲಿ ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಹರಿಯಾಣ, ಉತ್ತರಾಖಂಡ ಮತ್ತು ಜಮ್ಮುವಿನ 54 ಹಿಂದೂ ರಾಷ್ಟ್ರವಾದಿ ಗುಂಪುಗಳ ಮುಖಂಡರು, ವಕೀಲರು, ವಿಚಾರವಂತರು, ದೇವಸ್ಥಾನದ ಟ್ರಸ್ಟಿಗಳು, ಸಂಪಾದಕರು, ಉದ್ಯಮಿಗಳು ಮತ್ತು ಆರ್‌ಟಿಐ ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂದೂ ಸಂತರು ಮತ್ತು ಮಹಂತರಿಂದ ಮಾರ್ಗದರ್ಶನ

1. ಪವನ್ ಚಿಂತನ ಧಾರಾ ಆಶ್ರಮದ ಶ್ರೀ. ಪವನ ಸಿಂನ್ಹಾ ಇವರು ಹಲಾಲ್ ಪ್ರಮಾಣಪತ್ರಗಳನ್ನು ನಿಯಂತ್ರಿಸುವ ಉತ್ತರ ಪ್ರದೇಶ ಸರಕಾರದ ನಿರ್ಧಾರವನ್ನು ಬೆಂಬಲಿಸಿದ್ದಾರೆ.

2. ಆಚಾರ್ಯ ಮಹಾಮಂಡಳೇಶ್ವರ ಪ್ರಣವಾನಂದ ಸರಸ್ವತಿ ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಹಿಂದೂ ಅಲ್ಪಸಂಖ್ಯಾತರ ಮಾನವ ಹಕ್ಕುಗಳನ್ನು ರಕ್ಷಿಸಲು ನೆರೆಯ ದೇಶದ ಮಧ್ಯಂತರ ಸರಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದರು.