South Korea Air Crash : ದಕ್ಷಿಣ ಕೊರಿಯಾದಲ್ಲಿ ಭೀಕರ ವಿಮಾನ ಅಪಘಾತ : 179 ಜನರ  ಸಾವು  

ಮುವಾನ (ದಕ್ಷಿಣ ಕೊರಿಯಾ) – ಇಲ್ಲಿನ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಇಳಿಯುತ್ತಿದ್ದ ‘ಬೋಯಿಂಗ್ 737-800 ಜೆಟ್’ ವಿಮಾನದ ಅಪಘಾತವಾಗಿ ಅದರಲ್ಲಿ 179 ಜನರು ಸಾವನ್ನಪ್ಪಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಘಟನೆಗೆ ನಿಖರ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ, ವಿಮಾನದ ಲ್ಯಾಂಡಿಂಗ್ ಗೇರ್‌ನಲ್ಲಿನ ಅಸಮರ್ಪಕ ಕಾರ್ಯದಿಂದಾಗಿ ವಿಮಾನ ರನ್ ವೇ ಮೇಲಿನಿಂದ ಜಾರಿದ್ದರಿಂದ ವಿಮಾನ ಸ್ಫೋಟಗೊಂಡಿದೆಯೆಂದು ಹೇಳಲಾಗುತ್ತಿದೆ. ಕೆಲವರ ಪ್ರಕಾರ, ವಿಮಾನಕ್ಕೆ ಹಕ್ಕಿಯೊಂದು ಬಡಿದಿದ್ದರಿಂದ ಅಪಘಾತ ಸಂಭವಿಸಿದೆ ಎಂದು ಹೇಳುತ್ತಿದ್ದಾರೆ. ಈ ವಿಮಾನದಲ್ಲಿ 181 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ 175 ಪ್ರಯಾಣಿಕರು ಮತ್ತು 6 ಸಿಬ್ಬಂದಿ ಇದ್ದರು. ಅವರಲ್ಲಿ 2 ಮಂದಿ ಮಾತ್ರ ಬದುಕುಳಿದರು. ವಿಮಾನವು ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಹೊರಟಿತ್ತು. ದಕ್ಷಿಣ ಕೊರಿಯಾದ ಇತಿಹಾಸದಲ್ಲಿಯೇ ಇದು ಅತಿ ದೊಡ್ಡ ವಿಮಾನ ಅಪಘಾತವಾಗಿದೆಯೆಂದು ಹೇಳಲಾಗುತ್ತದೆ. ದಕ್ಷಿಣ ಕೊರಿಯಾದ ಅಧ್ಯಕ್ಷರು ವಿಮಾನ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.